Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:21 - ಕನ್ನಡ ಸತ್ಯವೇದವು J.V. (BSI)

21 ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ದೊರಕಿಸಿ ಅವರ ಬೊಕ್ಕಸಗಳನ್ನು ತುಂಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗಿರಲು ನನ್ನನ್ನು ಪ್ರೀತಿಸುವವರಿಗೆ ಧನದ ಬಾಧ್ಯತೆಯನ್ನು ಅನುಗ್ರಹಿಸಿ, ಅವರ ಬೊಕ್ಕಸಗಳನ್ನು ತುಂಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನ್ನನ್ನು ಪ್ರೀತಿಸುವವರಿಗೆ ದೊರಕಿಸುವೆ ಸಿರಿಸಂಪತ್ತನ್ನು ಬಾಧ್ಯವಾಗಿ ನಾನವರ ಬೊಕ್ಕಸಗಳನ್ನು ತುಂಬಿಸುವೆ ಭರ್ತಿಯಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನನ್ನು ಪ್ರೀತಿಸುವವರಿಗೆ ನಾನು ಐಶ್ವರ್ಯವನ್ನು ಕೊಡುವೆನು. ಹೌದು, ಅವರ ಉಗ್ರಾಣಗಳನ್ನು ತುಂಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದುವರು. ನಾನು ಅವರ ಬೊಕ್ಕಸಗಳನ್ನು ತುಂಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:21
18 ತಿಳಿವುಗಳ ಹೋಲಿಕೆ  

ನಮ್ಮನ್ನು ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಯನ್ನು ಎದುರುನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿರುವದು.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬಿಸುವದಕ್ಕೆ ತಿಳುವಳಿಕೆಯೇ ಉಪಕರಣ.


ಅವರಿಂದ ಬಿಟ್ಟೀಕೆಲಸ ಮಾಡಿಸಿಕೊಂಡ ಜನಾಂಗವನ್ನು ನಾನು ಶಿಕ್ಷಿಸಿದ ನಂತರ ಅವರು ಬಹಳ ಆಸ್ತಿವಂತರಾಗಿ ಆ ದೇಶದಿಂದ ಬಿಡುಗಡೆಯಾಗಿ ಬರುವರು.


ಬೇಡಿಗಳನ್ನು ಹಾಕಿಸಿಕೊಂಡವರ ಕಷ್ಟವನ್ನು ನೋಡಿ ಅವರ ಸಂಗಡ ನೀವು ದುಃಖ ಪಟ್ಟದ್ದಲ್ಲದೆ ನಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟಿರಿ.


ಸಕಲವಿಧವಾದ ಅಮೂಲ್ಯಸಂಪತ್ತನ್ನು ಕಂಡುಹಿಡಿದು ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬುವೆವು.


ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ.


ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ನನ್ನಲ್ಲಿ ಧನಘನತೆಗಳೂ ಶ್ರೇಷ್ಠಸಂಪತ್ತೂ ನೀತಿಯೂ ಇರುತ್ತವೆ.


ಅವನ ತಪ್ಪು ಬೈಲಾದರೆ ಅವನು ಏಳರಷ್ಟು ಕೊಡಬೇಕಾಗುವದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ತೆತ್ತೇ ತೀರಬೇಕು.


ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು; ಅದು ವ್ಯಸನವನ್ನು ಸೇರಿಸದು.


ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ; ದುಷ್ಟನ ಆದಾಯವು ಕಳವಳವೇ.


ಜ್ಞಾನಿಯ ನಿವಾಸದಲ್ಲಿ ಎಣ್ಣೆಯೂ ಶ್ರೇಷ್ಠ ಸಂಪತ್ತೂ ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು