Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:35 - ಕನ್ನಡ ಸತ್ಯವೇದವು J.V. (BSI)

35 ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಯೆಹೋವನ ಕಟಾಕ್ಷಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಳ್ಳುವನು ಸರ್ವೇಶ್ವರನ ಕೃಪಾಕಟಾಕ್ಷಕ್ಕೆ ಪಾತ್ರನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನನ್ನನ್ನು ಕಂಡುಕೊಂಡಂಥವನು ಜೀವವನ್ನು ಕಂಡುಕೊಳ್ಳುತ್ತಾನೆ. ಅವನಿಗೆ ಯೆಹೋವನ ಕೃಪೆಯು ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಏಕೆಂದರೆ ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಯೆಹೋವ ದೇವರ ಕೃಪೆಯನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:35
18 ತಿಳಿವುಗಳ ಹೋಲಿಕೆ  

ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು.


ಯೆಹೋವನು ಒಳ್ಳೆಯವನಿಗೆ ದಯೆಮಾಡುವನು; ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.


ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ನನ್ನ ಮಾತಿಗೆ ಕಿವಿಗೊಡುವವನಾದರೋ ಸ್ವಸ್ಥವಾಗಿರುತ್ತಾ ಯಾವ ಕೇಡಿಗೂ ಭಯಪಡದೆ ಸುರಕ್ಷಿತನಾಗಿರುವನು ಎಂಬದೇ.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಅವುಗಳನ್ನು ಹೊಂದುವವರಿಗೆ ಅವು ಜೀವವು. ದೇಹಕ್ಕೆಲ್ಲಾ ಅವೇ ಆರೋಗ್ಯವು.


ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ ಸಮ್ಮತಿಯನ್ನೂ ಪಡೆದುಕೊಳ್ಳುವಿ.


ಅವು ನಿನಗೆ ಜೀವವೂ ನಿನ್ನ ಕೊರಳಿಗೆ ಭೂಷಣವೂ ಆಗಿರುವವು.


ಮೂಢರೇ, [ಮೂಢತ್ವವನ್ನು] ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ ಎಂದು ಪ್ರಬೋಧಿಸುತ್ತಾಳೆ.


ಪತ್ನೀಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.


ಧನವು ಹೇಗೋ ಹಾಗೆ ಜ್ಞಾನವೂ ಆಶ್ರಯ; ಜ್ಞಾನಕ್ಕೆ ವಿಶೇಷವೇನಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬದೇ.


ಸದುಪದೇಶವನ್ನು ಹಿಡಿ, ಸಡಿಲಬಿಡಬೇಡ; ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು