Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:2 - ಕನ್ನಡ ಸತ್ಯವೇದವು J.V. (BSI)

2 ಪಶುಗಳನ್ನು ಕೊಯಿಸಿ [ಪಾನದ್ರವ್ಯಗಳೊಡನೆ] ದ್ರಾಕ್ಷಾರಸವನ್ನು ಬೆರಸಿ ಔತಣವನ್ನು ಸಿದ್ಧಪಡಿಸಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಕೆ ಪಶುಗಳನ್ನು ಕೊಯಿಸಿ ಪಾನದ್ರವ್ಯಗಳೊಡನೆ ದ್ರಾಕ್ಷಾರಸವನ್ನು ಬೆರಸಿ, ಔತಣವನ್ನು ಸಿದ್ಧಪಡಿಸಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪಶುಗಳನ್ನು ಕೊಯ್ಯಿಸಿ ದ್ರಾಕ್ಷಾರಸವನ್ನು ಬೆರೆಸಿ ಔತಣವನ್ನು ಆಕೆ ಸಿದ್ಧಪಡಿಸುತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜ್ಞಾನವೆಂಬಾಕೆ ಮಾಂಸದ ಅಡಿಗೆಯನ್ನೂ ದ್ರಾಕ್ಷಾರಸವನ್ನೂ ತಯಾರಿಸಿದ್ದಾಳೆ. ಆಕೆ ತನ್ನ ಮೇಜಿನ ಮೇಲೆ ಆಹಾರವನ್ನು ಇಟ್ಟಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಕೆಯು ಮಾಂಸದ ಆಹಾರನ್ನು ತಯಾರಿಸಿ, ತನ್ನ ದ್ರಾಕ್ಷಾರಸವನ್ನು ಬೆರೆಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:2
8 ತಿಳಿವುಗಳ ಹೋಲಿಕೆ  

ಇದಲ್ಲದೆ ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲಜನಾಂಗಗಳಿಗೂ ಸಾರವತ್ತಾದ ಮೃಷ್ಟಾನ್ನದಿಂದಲೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಅಣಿಮಾಡುವನು.


ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.


ವಿುಶ್ರಮದ್ಯಪಾನಾಸಕ್ತರಾಗಿ ದ್ರಾಕ್ಷಾರಸವನ್ನು ಕುಡಿಯುತ್ತಾ ಕಾಲಹರಣಮಾಡುವವರೇ.


ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ನೀನು ನನಗೆ ಉಪದೇಶಮಾಡಬಹುದಾಗಿತ್ತು; ದ್ರಾಕ್ಷೆಯ ವಿುಶ್ರಪಾನಕವನ್ನು, ನನ್ನ ದಾಳಿಂಬರದ ಸವಿರಸವನ್ನು, ನಿನಗೆ ಕುಡಿಸುತ್ತಿದ್ದೆನು.


ಬೆನ್ಯಾಮೀನನು ಅವರ ಸಂಗಡ ಇರುವದನ್ನು ಯೋಸೇಫನು ಕಂಡು ತನ್ನ ಮನೆವಾರ್ತೆಯವನನ್ನು ಕರಸಿ - ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟಮಾಡಬೇಕಾಗಿದೆ; ಇವರನ್ನು ಮನೆಯೊಳಗೆ ಕರೆದುಕೊಂಡು ಹೋಗಿ ಪಶುವನ್ನು ಕೊಯಿಸಿ ಎಲ್ಲಾ ಸಿದ್ಧಪಡಿಸು ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು