Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:6 - ಕನ್ನಡ ಸತ್ಯವೇದವು J.V. (BSI)

6 ಮೂಢರೇ, [ಮೂಢತ್ವವನ್ನು] ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ ಎಂದು ಪ್ರಬೋಧಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೂಢರೇ, ನಿಮ್ಮ ಮೂಢತ್ವವನ್ನು ಬಿಟ್ಟುಬಾಳಿರಿ, ವಿವೇಕ ಮಾರ್ಗದಲ್ಲಿ ನೆಟ್ಟಗೆ ನಡೆಯಿರಿ,” ಎಂದು ಪ್ರಬೋಧಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:6
17 ತಿಳಿವುಗಳ ಹೋಲಿಕೆ  

ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ನಾನು ಜ್ಞಾನಮಾರ್ಗವನ್ನು ಉಪದೇಶಿಸಿ ಧರ್ಮಮಾರ್ಗದಲ್ಲಿ ನಿನ್ನನ್ನು ನಡಿಸುವೆನು.


ಆತನು ಅವರಿಗೆ - ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗುವದಕ್ಕೆ ಹೆಣಗಾಡಿರಿ. ಬಹುಜನ ಒಳಕ್ಕೆ ಹೋಗುವದಕ್ಕೆ ನೋಡುವರು, ಆದರೆ ಅವರಿಂದಾಗುವದಿಲ್ಲ ಎಂದು ನಿಮಗೆ ಹೇಳುತ್ತೇನೆ.


ಆದದರಿಂದ ಅನ್ಯಜನರ ಮಧ್ಯದಲ್ಲಿಂದ ಹೊರಟು ಬಂದು ಪ್ರತ್ಯೇಕವಾಗಿರಿ; ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.


ಪರಲೋಕದಿಂದ ಬಂದ ಮತ್ತೊಂದು ಶಬ್ದವನ್ನು ಕೇಳಿದೆನು; ಅದು ಹೇಳಿದ್ದೇನಂದರೆ - ನನ್ನ ಪ್ರಜೆಗಳೇ, ಅವಳನ್ನು ಬಿಟ್ಟುಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿಯಾಗಬಾರದು.


ಬೇರೆ ಅನೇಕವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು - ವಕ್ರಬುದ್ಧಿಯುಳ್ಳ ಈ ಸಂತತಿಯವರಿಂದ ತಪ್ಪಿಸಿಕೊಳ್ಳಿರಿ ಎಂದು ಅವರನ್ನು ಎಚ್ಚರಿಸಿದನು.


ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಸ್ಸಿನ ವರುಷಗಳು ವೃದ್ಧಿಯಾಗುವವು.


ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಯೆಹೋವನ ಕಟಾಕ್ಷಕ್ಕೆ ಗುರಿಯಾಗುವನು.


ದುಷ್ಟರೇ, ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.


ಎಲೌ ಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತವರುಮನೆಯನ್ನೂ ಮರೆತುಬಿಡು.


ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.


ಕಂದಾ, ಕೇಳು, ಜ್ಞಾನವಂತನಾಗಿರು, ನಿನ್ನ ಮನಸ್ಸನ್ನು [ಜ್ಞಾನ] ಮಾರ್ಗದಲ್ಲಿ ಮುಂದೆ ನಡೆಯಿಸು.


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು