ಜ್ಞಾನೋಕ್ತಿಗಳು 9:7 - ಕನ್ನಡ ಸತ್ಯವೇದವು J.V. (BSI)7 ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೆ ಕಳಂಕವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಧರ್ಮನಿಂದಕನನ್ನು ಶಿಕ್ಷಿಸುವವನು ತನ್ನನ್ನು ಅವಮಾನಕ್ಕೆ ಗುರಿಮಾಡಿಕೊಳ್ಳುವನು, ಕೆಟ್ಟವನನ್ನು ಗದರಿಸುವವನಿಗೇ ಕಳಂಕವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕುಚೋದ್ಯಗಾರರನ್ನು ಶಿಕ್ಷಿಸುವವನು ತನ್ನನ್ನೆ ಅಪಮಾನಕ್ಕೆ ಗುರಿಮಾಡಿಕೊಳ್ಳುತ್ತಾನೆ. ದುಷ್ಟನನ್ನು ಗದರಿಸುವವನು ತನಗೇ ಕಳಂಕ ತಂದುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀನು ಅಹಂಕಾರಿಗೆ ಅವನ ತಪ್ಪನ್ನು ತಿಳಿಸಲು ಪ್ರಯತ್ನಿಸಿದರೆ ಅವನು ನಿನ್ನನ್ನೇ ಖಂಡಿಸುವನು. ನೀನು ಕೆಡುಕನಿಗೆ ಅವನ ತಪ್ಪನ್ನು ತಿಳಿಸಿದರೆ ಅವನು ನಿನ್ನನ್ನೇ ಗೇಲಿಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಪರಿಹಾಸ್ಯ ಮಾಡುವವನನ್ನು ಗದರಿಸುವವನು ತನ್ನನ್ನು ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. ಅಧ್ಯಾಯವನ್ನು ನೋಡಿ |