Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:11 - ಕನ್ನಡ ಸತ್ಯವೇದವು J.V. (BSI)

11 ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ನೀಚಲಾಭವನ್ನು ಹೊಂದುವುದಕ್ಕಾಗಿ ಮಾಡಬಾರದ ಬೋಧನೆಯನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಅವರ ಬಾಯಿಗಳನ್ನು ಮುಚ್ಚಿಸಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಸ್ಲ್ಯಾಂಚಿ ತೊಂಡಾ ಧಾಪುಚೆ ನಕ್ಕೊ ಹೊಲ್ಲೆಚ್ ಶಿಕ್ವುನ್ ಸಗ್ಳಿ ಕುಟ್ಮಾ ಚಾವ್ತಳಿ ಸರ್ಕೆ ತೆನಿ ಕರ್‍ತಾತ್ , ಹೆ ಸಗ್ಳೆ ತೆನಿ ಹೆ ಬುರ್ಶೆ ಕಾಮ್ ತೆನಿ ಪೈಸ್ಯಾಚ್ಯಾ ಆಸೆನ್ ಕರ್‍ತಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:11
22 ತಿಳಿವುಗಳ ಹೋಲಿಕೆ  

ಮನೆಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಫೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಇವರೊಳಗೆ ಸೇರಿದವರೇ.


ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವ ಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಸಭೆಯಲ್ಲಿ ಭೇದಹುಟ್ಟಿಸುವ ಮನುಷ್ಯನನ್ನು ಎರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;


ಅರಸನೋ ದೇವರಲ್ಲಿ ಆನಂದಿಸುವನು. ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವದನ್ನು ಕಂಡು ಹಿಗ್ಗುವರು.


ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವದಕ್ಕೂ ಎದುರಿಸುವವರ ಬಾಯಿಕಟ್ಟುವದಕ್ಕೂ ಶಕ್ತನಾಗಿರುವಂತೆ ಕ್ರಿಸ್ತ ಬೋಧಾನುಸಾರವಾದ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.


ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ -


ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವದು.


ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ.


ಆತನನ್ನು ಇನ್ನೇನು ಕೇಳುವದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ನೀವು ಜವೆಗೋದಿಯ ಹಿಡಿಗಳನ್ನೂ ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವದರಿಂದ ಸಾಯದಿರತಕ್ಕವರನ್ನು ಸಾಯಿಸಿ ಸಾಯತಕ್ಕವರನ್ನು ಉಳಿಸಿ ನನ್ನ ಜನರ ನಡುವೆ ನನ್ನ ಘನತೆಗೆ ಕುಂದು ತಂದಿದ್ದೀರಿ.


ಅವರ ಜ್ಞಾನವು ಎಷ್ಟರದು? ಆದದರಿಂದ ನಾನು ಇವರ ಹೆಂಡರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರವಿುಸುವವರಿಗೂ ಕೊಟ್ಟುಬಿಡುವೆನು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಕೂಲಿಯಾಳು ಕುರುಬನೂ ಕುರಿಗಳ ಒಡೆಯನೂ ಆಗಿರದೆ ತೋಳ ಬರುವದನ್ನು ಕಾಣುತ್ತಲೇ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ; ತೋಳವು ಅವುಗಳನ್ನು ಹಿಡುಕೊಂಡು ಹಿಂಡನ್ನು ಚದರಿಸುತ್ತದೆ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದಲ್ಲದೆ ಹರಟೆಮಾತಾಡುವವರೂ ಇತರರ ಕೆಲಸದಲ್ಲಿ ಕೈಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.


ಅವರು ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಸತ್ಯಭ್ರಷ್ಟರಾಗಿ ಕೆಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು