Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:13 - ಕನ್ನಡ ಸತ್ಯವೇದವು J.V. (BSI)

13-14 ಆದಕಾರಣ ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ ಕ್ರಿಸ್ತ ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪ್ರವಾದಿಯು ಹೇಳಿದ ಮಾತುಗಳು ಸತ್ಯವಾಗಿವೆ. ಆದ್ದರಿಂದ ಅವರು ಮಾಡುತ್ತಿರುವ ತಪ್ಪುಗಳನ್ನು ಅವರಿಗೆ ತಿಳಿಸು. ನೀನು ಅವರ ವಿಷಯದಲ್ಲಿ ಕಟ್ಟುನಿಟ್ಟಾಗಿರಬೇಕು. ಆಗ ಅವರು ತಮ್ಮ ನಂಬಿಕೆಯಲ್ಲಿ ದೃಢವಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಈ ಸಾಕ್ಷಿಯು ನಿಜವೇ. ಇದರ ದೆಸೆಯಿಂದ ಅವರು ನಂಬಿಕೆಯಲ್ಲಿ ಸ್ವಸ್ಥರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆನಿ ಸಾಂಗಲ್ಲಿ ಗೊಸ್ಟ್ ಖರಿ ಹಾಯ್ ತ್ಯಾ ಗೊಸ್ಟಿಯಾ ಚುಕ್ ನ್ಹಯ್ ತಸೆ ಮನುನ್ ತೆಂಕಾ ಉಲ್ಲೆ ಖಡಕ್ ತಾಕಿತ್ ದಿ, ತಸೆ ಹೊತಾನಾ ತೆನಿಚ್ ಅಪ್ಲ್ಯಾ ವಿಶ್ವಾಸಾತ್ ಘಟ್ಟ್ ಹೊವ್ನ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:13
12 ತಿಳಿವುಗಳ ಹೋಲಿಕೆ  

ಹೇಗಂದರೆ ವೃದ್ಧರು ಮದ್ಯಾಸಕ್ತಿಯಿಲ್ಲದವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥರೂ ಆಗಿರಬೇಕೆಂದು ಬೋಧಿಸು. ಹಾಗೆಯೇ ವೃದ್ಧಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಗುಲಾಮರೂ ಆಗಿರದೆ


ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು; ಇವರಿಂದ ವಿುಕ್ಕಾದವರಿಗೂ ಭಯವುಂಟಾಗುವದು.


ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ. ನಿಮ್ಮನ್ನು ಕೆಡವಿಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೇ ಸೇವಕನಾಗಿರುವಿ.


[ಕಾರ್ಯದಿಂದ] ಹೊರಪಡದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯು ಲೇಸು.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗುಪಕಾರ; ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ; ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರೋಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ನನ್ನ ಮನಸ್ಸು ನಿನ್ನ ನಿಬಂಧನೆಗಳಲ್ಲಿ ಆಸಕ್ತವಾಗಲಿ; ಆಗ ನನ್ನ ಆಶಾಭಂಗಕ್ಕೆ ಕಾರಣವಿರುವದಿಲ್ಲ.


ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು