Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:7 - ಕನ್ನಡ ಸತ್ಯವೇದವು J.V. (BSI)

7 ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಸಭಾಧ್ಯಕ್ಷನು ದೇವರ ಕಾರ್ಯಭಾರವನ್ನು ಉಳ್ಳವನಾಗಿರುವುದರಿಂದ ನಿಂದಾರಹಿತನಾಗಿರಬೇಕು; ಅವನು ಗರ್ವಿಷ್ಠನೂ ಮುಂಗೋಪಿಯೂ ಮದ್ಯಪಾನ ಮಾಡುವವನೂ ಹೊಡೆದಾಡುವವನೂ ನೀಚಲಾಭವನ್ನು ಆಶಿಸುವವನೂ ಆಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಾಂಡ್ಯಾಚೊ ಮುಖಂಡ್ ಮಟ್ಲ್ಯಾರ್ ದೆವಾಚ್ಯಾ ಕಾಮಾಚ್ಯಾ ವಿಶಯಾತ್ ಜವಾಬ್ದಾರಿ ಘೆಟಲ್ಲೊ ರ್‍ಹಾತಾ, ತಸೆ ಹೊವ್ನ್ ತೊ ಕಸ್ಲ್ಯಾಬಿ ಚುಕೆತ್ ರ್‍ಹಾವ್ಚೆ ನ್ಹಯ್, ತೊ ಚಿರ್ಡುನ್ ಬೊಲ್ತಲೊ ನಾ ಹೊಲ್ಯಾರ್ ಎಗ್ದಮ್ ರಾಗ್‍ ಕರುನ್ ಘೆತಲೊ, ನಾ ಹೊಲ್ಯಾರ್ ಎಕ್ ಫಿದೊಡೊ ನಾ ಹೊಲ್ಯಾರ್ ಮಂಡ್ ನಾ ಹೊಲ್ಯಾರ್ ಪೈಶಾಂಚಿ ಅಶಾ ಹೊತ್ತೊ ರ್‍ಹಾವ್ಚೊ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:7
23 ತಿಳಿವುಗಳ ಹೋಲಿಕೆ  

ಮುಖ್ಯವಾಗಿ ಬಂಡುತನವನ್ನು ಆಶಿಸಿ ಶರೀರಭಾವಾನುಸಾರ ನಡೆದು ಪ್ರಭುತ್ವ ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಫಾಪರರಾಗಿದ್ದು ಮಹಾಪದವಿಯವರನ್ನು ನಿರ್ಭಯವಾಗಿ ದೂಷಿಸುತ್ತಾರೆ.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ ದೇವರ ಚಿತ್ತದ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆಮಾಡಿರಿ.


ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.


ಸ್ವಾವಿು ಹೇಳಿದ್ದೇನಂದರೆ - ಹೊತ್ತುಹೊತ್ತಿಗೆ ಅಶನಕ್ಕೆ ಬೇಕಾದದ್ದನ್ನು ಅಳೆದು ಕೊಡುವದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇವಿುಸಿದ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೆವಾರ್ತೆಯವನು ಯಾರು?


ಒಳಗಣ ಪ್ರಾಕಾರವನ್ನು ಪ್ರವೇಶಿಸುವಾಗ ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿದಿರಬಾರದು.


ಈ [ನನ್ನ] ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ; ದೈವದರ್ಶನವಾಗುತ್ತಿರುವಾಗಲೂ ಓಲಾಡುತ್ತಾರೆ, ನ್ಯಾಯತೀರಿಸುತ್ತಿರುವಾಗಲೂ ಅತ್ತಿತ್ತ ತೂಗಾಡುತ್ತಾರೆ.


ಮುಂಗೋಪಿಯು ಬುದ್ಧಿಗೆಡುವನು; ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.


ಕೋಪಿಷ್ಟನು ವ್ಯಾಜ್ಯವನ್ನೆಬ್ಬಿಸುವನು; ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಸದ್ಬೋಧನೆ ಹೇಳುವವರೂ ಆಗಿರಬೇಕೆಂದು ಬೋಧಿಸು.


ನೀನು ಕ್ರೇತದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ ಪಟ್ಟಣಪಟ್ಟಣಗಳಲ್ಲೂ ಸಭೆಯ ಹಿರಿಯರನ್ನು ನೇವಿುಸಬೇಕೆಂದು ನಾನು ನಿನಗೆ ಅಪ್ಪಣೆ ಕೊಟ್ಟು ನಿನ್ನನ್ನು ಅಲ್ಲೇ ಬಿಟ್ಟು ಬಂದೆನಲ್ಲಾ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ -


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡಲಿಕ್ಕೆ ಅವರ ಮೇಲಿಟ್ಟ ನಂಬಿಗಸ್ತನೂ ವಿವೇಕಿಯೂ ಆದಂಥ ಆಳು ಯಾರು?


ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ; ಕೋಪಕ್ಕೆ ಮೂಢರ ಎದೆಯೇ ನೆಲೆ.


ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ; ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.


ನನ್ನ ಪ್ರಾಣವೇ, ಅವರ ಗುಪ್ತವಾದ ದುರಾಲೋಚನೆಗೆ ನೀನು ಒಳಪಡಬಾರದು; ನನ್ನ ಮನವೇ, ಅವರ ಗುಂಪಿಗೆ ನೀನು ಸೇರಬೇಡ. ಅವರು ಕೋಪೋದ್ರೇಕದಿಂದ ಮನುಷ್ಯರನ್ನು ಸಂಹರಿಸಿದರು; ಮದದಿಂದ ಎತ್ತುಗಳನ್ನು ಊನಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು