Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:11 - ಕನ್ನಡ ಸತ್ಯವೇದವು J.V. (BSI)

11 ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಲ್ಲರಿಗೂ ರಕ್ಷಣೆಯನ್ನು ಕೊಡುವ ದೇವರ ಕೃಪೆಯು ಪ್ರತ್ಯಕ್ಷವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್ ದೆವಾಚಿ ಕುರ್ಪಾ ಸಗ್ಳ್ಯಾ ಲೊಕಾಕ್ನಿ ಸುಟ್ಕಾ ಹಾನುಸಾಟ್ನಿ ಪ್ರಕಟ್ ಹೊಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:11
50 ತಿಳಿವುಗಳ ಹೋಲಿಕೆ  

ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬದು ಆತನ ಚಿತ್ತವಾಗಿದೆ.


ನಂಬಿಕೆಯ ಮೂಲಕ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ವರವೇ.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.


ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ


ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ಹೆಚ್ಚುಕಡಿಮೆ ಉಂಟು. ಹೇಗಂದರೆ ಆ ಒಬ್ಬನ ಅಪರಾಧದಿಂದ ಎಲ್ಲಾ ಮನುಷ್ಯರು ಸತ್ತದ್ದು ನಿಶ್ಚಯವಾಗಿರಲಾಗಿ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಎಲ್ಲಾ ಮನುಷ್ಯರಿಗೆ ಹೇರಳವಾಗಿ ಸಿದ್ಧವಾಗಿರುವದು ಮತ್ತೂ ನಿಶ್ಚಯವಲ್ಲವೇ.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಂಟುಮಾಡಿತು.


ನಾವು ಈಗ ನೆಲೆಗೊಂಡಿರುವ ದೇವರ ಕೃಪಾಶ್ರಯದಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾಯಿತು. ಮತ್ತು ದೇವರ ಮಹಿಮೆಯನ್ನು ಹೊಂದುವೆವೆಂಬ ಭರವಸದಿಂದ ಉಲ್ಲಾಸವಾಗಿದ್ದೇವೆ.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂವಿುಯು ಸ್ಥಿರವಾಗಿರುವದು, ಕದಲುವದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.


ನೀವು ದೇವರ ಕೃಪೆಯನ್ನು ಕುರಿತು ಸತ್ಯಾರ್ಥವನ್ನು ಕೇಳಿ ತಿಳುಕೊಂಡ ದಿವಸದಿಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟು ವೃದ್ಧಿಯಾಗುತ್ತಾ ಬಂದ ಪ್ರಕಾರ ಲೋಕದಲ್ಲೆಲ್ಲಾ ಹಬ್ಬಿ ಫಲಕೊಟ್ಟು ವೃದ್ಧಿಯಾಗುತ್ತಾ ಬರುತ್ತದೆ.


ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ಕರ್ಮಮಾರ್ಗದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದಕ್ಕೆ ಕಾರಣವೇ ಇಲ್ಲ.


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ಹಾಗೆಯೇ ಕರ್ತನು ನಮಗೆ ಅಪ್ಪಣೆಕೊಟ್ಟಿದ್ದಾನೆ; ಹೇಗಂದರೆ - ನೀನು ಲೋಕದ ಕಟ್ಟಕಡೆಯವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇವಿುಸಿದ್ದೇನೆ ಎಂದು ದೇವರು ಹೇಳಿದ್ದಾನೆ ಅಂದರು.


ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಭಿಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.


ನಿಜವಾದ ಬೆಳಕು ಲೋಕಕ್ಕೆ ಬರುವದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಆಮೇಲೆ ಅವರಿಗೆ - ನೀವು ಲೋಕದ ಎಲ್ಲಾ ಕಡೆಗೆ ಹೋಗಿ ಜಗತ್ತಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಎಂಬೀ ಮಾತನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. ದೊಡ್ಡ ಬೆಟ್ಟವೇ, ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆಮಾಡುವನು; ಇದರ ಮೇಲೆ ದೇವರ ದಯೆಯಿರಲಿ, ದೇವರ ದಯೆಯಿರಲಿ ಎಂಬ ಜನಘೋಷವಾಗುವದು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ಆದರೂ ಅವರ ಕಿವಿಗೆ ಬೀಳಲಿಲ್ಲವೇನು ಎಂದು ಕೇಳುತ್ತೇನೆ. ಬಿದ್ದದ್ದು ನಿಶ್ಚಯ. ಸಾರುವವರ ಧ್ವನಿಯು ಭೂವಿುಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.


ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.


ಆ ಅಜ್ಞಾನಕಾಲಗಳನ್ನು ದೇವರು ಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಾನೆ.


ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು