ತೀತನಿಗೆ 2:7 - ಕನ್ನಡ ಸತ್ಯವೇದವು J.V. (BSI)7 ಸತ್ಕಾರ್ಯಮಾಡುವದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಯಥಾರ್ಥತ್ವವೂ ಗೌರವವೂ ಆಕ್ಷೇಪಣೆಗೆ ಆಸ್ಪದವಿಲ್ಲದಂಥ ಸ್ವಸ್ಥಬುದ್ಧಿಯೂ ಇರಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7-8 ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀನು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಯುವಕರಿಗೆ ಸರ್ವವಿಧದಲ್ಲಿಯೂ ಮಾದರಿಯಾಗಿರಬೇಕು. ನಿನ್ನ ಉಪದೇಶದಲ್ಲಿ ಯಥಾರ್ಥತೆಯನ್ನು ಮತ್ತು ಗಂಭೀರತೆಯನ್ನು ತೋರಿಸಿಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯ ಮಾಡುವುದರಲ್ಲಿ ಆದರ್ಶವಾಗಿ ತೋರಿಸು. ಬೋಧನೆಯಲ್ಲಿ ಪ್ರಾಮಾಣಿಕತೆಯನ್ನೂ ಗಂಭೀರತೆಯನ್ನೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಸಗ್ಳ್ಯಾ ಕಾಮಾತ್ನಿ ತಿಯಾ ತುಜ್ಯಾ ಯೆವ್ಡ್ಯಾಕ್ ದುಸ್ರ್ಯಾಕ್ನಿ ಎಕ್ ಬರ್‍ಯಾ ಚಾಲಿಚೊ ಉದಾರನ್ ಹೊವ್ನ್ ರ್‍ಹಾವ್ಚೆ. ತುಜ್ಯಾ ಶಿಕ್ವುತಲ್ಯಾ ಕಾಮಾತ್ ನಿಯತ್ತಿಚೊ ಅನಿ ಗಂಬಿರ್ ಹೊವ್ನ್ ರ್‍ಹಾವ್ಚೆ. ಅಧ್ಯಾಯವನ್ನು ನೋಡಿ |