Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:8 - ಕನ್ನಡ ಸತ್ಯವೇದವು J.V. (BSI)

8 ಆಗ ನಮ್ಮನ್ನು ಎದುರಿಸುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವದಕ್ಕೆ ಅವಕಾಶವಿಲ್ಲದೆ ನಾಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಸತ್ಯವನ್ನೇ ಮಾತನಾಡು. ಆಗ ನಿನ್ನನ್ನು ಟೀಕಿಸಲು ಸಾಧ್ಯವಿಲ್ಲದೆ ನಿನ್ನ ವಿರೋಧಿಗಳು ಅಪಮಾನಕ್ಕೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಂದೆಗೆ ಹೊರತಾದ ಸ್ವಸ್ಥ ಮಾತುಗಳನ್ನಾಡುವವನಾಗಿರು. ಇದರಿಂದ ವಿರೋಧಿಸುವವನು ನಿನ್ನ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕಾಗದೆ ನಾಚಿಕೆ ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಶಿಕ್ವುತಾನಾ ಬರ್‍ಯಾ ಗೊಸ್ಟಿಯಾ ವಾಪರ್, ಅಶೆ ತುಜ್ಯಾ ವಿರೊದ್ ಹೊತ್ತ್ಯಾಕ್ನಿ ತುಜ್ಯಾ ವಿರೊದ್ ಬೊಲುಕ್ ಕಾಯ್ಬಿ ರ್‍ಹಾಯ್‍ನಸ್ತಾನಾ ತೆಂಚಿ ತೆಂಕಾಚ್ ಲಜ್ಜಾ ಕರಿ ಸರ್ಕೆ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:8
15 ತಿಳಿವುಗಳ ಹೋಲಿಕೆ  

ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ತಿಳಿಯದೆ ಮಾತಾಡುವ ಮೂಢಜನರ ಬಾಯನ್ನು ನೀವು ಒಳ್ಳೇ ನಡತೆಯಿಂದ ಕಟ್ಟಬೇಕೆಂಬದೇ ದೇವರ ಚಿತ್ತ.


ಒಳ್ಳೇ ಮನಸ್ಸಾಕ್ಷಿಯುಳ್ಳವರಾಗಿರಿ; ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯನ್ನು ಕುರಿತು ಬೈಯುವವರು ನಿಮ್ಮನ್ನು ನಿಂದಿಸುವದಕ್ಕೆ ನಾಚಿಕೆಪಡುವರು.


ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಉಪದೇಶಕ್ಕೂ ಸಮ್ಮತಿಸದೆ ಹೋದರೆ


ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತು ಇಟ್ಟುಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.


ಆಮೇಲೆ ನಾನು ಅವರಿಗೆ - ನೀವು ಮಾಡಿದ್ದು ಒಳ್ಳೇದಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ಆದದರಿಂದ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಯಜಮಾನಿಯರಾಗಿರುವದು ನನಗೆ ಒಳ್ಳೇದಾಗಿ ತೋಚುತ್ತದೆ; ಹಾಗೆ ಮಾಡುವದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.


ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ನಾಚಿಕೊಂಡರು; ಗುಂಪುಕೂಡಿದ್ದ ಜನರೆಲ್ಲಾ ಆತನಿಂದಾಗುತ್ತಿದ್ದ ಎಲ್ಲಾ ಮಹತ್ವದ ಕಾರ್ಯಗಳಿಗೆ ಸಂತೋಷಪಟ್ಟರು.


ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು - ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.


ಆಗ ಆ ಶಾಸ್ತ್ರಿಯು - ಬೋಧಕನೇ, ಚೆನ್ನಾಗಿ ಹೇಳಿದೆ; ಒಬ್ಬನೇ ಇದ್ದಾನೆ, ಆತನ ಹೊರತು ಮತ್ತೊಬ್ಬ ದೇವರಿಲ್ಲ ಎಂದು ನೀನು ಹೇಳಿದ್ದು ಸತ್ಯ.


ಶಾಸ್ತ್ರಿಗಳಲ್ಲಿ ಒಬ್ಬನು ಅವರ ತರ್ಕವನ್ನು ಕೇಳಿ ಯೇಸು ಅವರಿಗೆ ಒಳ್ಳೆಯ ಉತ್ತರ ಕೊಟ್ಟನೆಂದು ತಿಳಿದು ಹತ್ತಿರಕ್ಕೆ ಬಂದು - ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಆತನನ್ನು ಕೇಳಿದ್ದಕ್ಕೆ ಯೇಸು -


ಯೇಸು - ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು. ಅವರು ಆತನ ವಿಷಯದಲ್ಲಿ ಬಹು ಆಶ್ಚರ್ಯಪಟ್ಟರು.


ನಮ್ಮ ಜನರು ಸತ್ಕ್ರಿಯಾಹೀನರಾಗದಂತೆ ಅವರೂ ಸಹೋದರರಿಗೆ ಬೇಕಾದದ್ದನ್ನು ಕೊಡುವವರಾಗಿ ಪರೋಪಕಾರವನ್ನು ಕಲಿತುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು