Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:3 - ಕನ್ನಡ ಸತ್ಯವೇದವು J.V. (BSI)

3 ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:3
37 ತಿಳಿವುಗಳ ಹೋಲಿಕೆ  

ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳನ್ನು ಮಾಡುವವರಾಗಿ ದ್ವೇಷಮನಸ್ಸುಳ್ಳವರೂ ಆಗಿದ್ದರೂ


ಆದರೆ ನೀವು ಮುಂಚೆ ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಲ್ಪಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದದರಿಂದಲೂ


ಪೂರ್ವದಲ್ಲಿ ನೀವು ಸಹ ಈ ದುರ್ಭಾವಗಳ ಅಧೀನದಲ್ಲಿದ್ದು ಈ ಕೆಲಸಗಳನ್ನು ನಡಿಸುತ್ತಿದ್ದಿರಿ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.


ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆಯುವವರಾಗಿರದೆ


ಮೂಢರೇ, [ಮೂಢತ್ವವನ್ನು] ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ ಎಂದು ಪ್ರಬೋಧಿಸುತ್ತಾಳೆ.


ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ಜಗಳ ಹೊಟ್ಟೆಕಿಚ್ಚು ದ್ವೇಷ ಸ್ವಾರ್ಥಬುದ್ಧಿ ಚಾಡಿಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬರುವದೋ ಏನೋ ನನಗೆ ಸಂಶಯ ಉಂಟು.


ಅದಕ್ಕೆ ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.


ಅವನು - ನಾನು ಹೋಗುವದಿಲ್ಲವೆಂದು ಹೇಳಿದಾಗ್ಯೂ ತರುವಾಯ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.


ಅದು ಅವನನ್ನು ವಂಚಿಸಿ - ನಿನ್ನ ತಪ್ಪು ಬೈಲಿಗೆ ಬರುವದಿಲ್ಲ. ಹೇಯವಾಗುವದಿಲ್ಲ ಎಂದು ಊದಿಬಿಡುತ್ತದೆ.


ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ.


ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿದವನಾಗಿದ್ದಾನೆ.


ಆತನು ಹೇಳಿದ್ದೇನಂದರೆ - ನೀವು ಮೋಸಹೋಗದಂತೆ ನೋಡಿಕೊಳ್ಳಿರಿ. ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು ನಾನು ಕ್ರಿಸ್ತನು ನಾನು ಕ್ರಿಸ್ತನು ಎಂತಲೂ ಆ ಕಾಲ ಹತ್ತಿರವಾಯಿತು ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ.


ಅವನು ಗಟ್ಟಿಯಾದ ಶಬ್ದದಿಂದ ಕೂಗುತ್ತಾ - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾನಗರಿಯು ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಆಶ್ರಯವೂ ಆದಳು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವದರಿಂದ ಭೂನಿವಾಸಿಗಳನ್ನು ಮರುಳುಗೊಳಿಸುತ್ತದೆ; ಅವರಿಗೆ - ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸುತ್ತದೆ.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಉನ್ನತಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ - ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು ಅಂದುಕೊಳ್ಳುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ;


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿರಿ.


ಪಾಪಾಧೀನಸ್ವಭಾವವು ನಾಶವಾಗಿ ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿತೆಂದು ತಿಳಿದಿದ್ದೇವೆ.


ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪಗಳನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.


ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆಹೊಂದಿದ್ದೀರೋ


ಮನೆಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಫೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಇವರೊಳಗೆ ಸೇರಿದವರೇ.


ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.


ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ವಿಸರ್ಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು ಅಂದರೆ ಮಹಾದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂದು ಅದು ನಮಗೆ ಬೋಧಿಸುತ್ತದೆ.


ಆದರೆ ಓನಾನನು ಈ ರೀತಿಯಾಗಿ ಆಗುವ ಸಂತಾನವು ತನ್ನದಾಗುವದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಲೊಲ್ಲದೆ ತನ್ನ ಅತ್ತಿಗೆಯಲ್ಲಿ ಸಂಗಮಮಾಡುವಾಗೆಲ್ಲಾ ತನ್ನ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.


ಅವನ ದಣಿಯು ಮನೆಗೆ ಬರುವ ತನಕ ಆ ಬಟ್ಟೆಯನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು