ತೀತನಿಗೆ 3:8 - ಕನ್ನಡ ಸತ್ಯವೇದವು J.V. (BSI)8 ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಉತ್ತಮವೂ ಮನುಷ್ಯರಿಗೆ ಪ್ರಯೋಜನಕರವೂ ಆಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಈ ಬೋಧನೆಯು ಸತ್ಯವಾದದ್ದು. ನೀನು ಜನರಿಗೆ ಈ ಸಂಗತಿಗಳನ್ನು ಒತ್ತಿಹೇಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಆಗ, ದೇವರಲ್ಲಿ ನಂಬಿಕೆ ಇಟ್ಟಿರುವವರು ಜಾಗರೂಕರಾಗಿದ್ದು ತಮ್ಮ ಜೀವನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವರು. ಇವು ಎಲ್ಲರಿಗೂ ಹಿತಕರವಾಗಿವೆ ಮತ್ತು ಪ್ರಯೋಜನಕರವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಹಿ ಗೊಸ್ಟಿಯಾ ಖರ್‍ಯಾ ಅನಿ ಹ್ಯಾ ಸಂಗ್ತಿಯಾ ತಿಯಾ ತೆಂಕಾ ಬರೆ ಕರುನ್ ಸಾಂಗುಚೆ ಮನುನ್ ಮಾಜಿ ಆಶಾ, ದೆವಾಕ್ ವಿಶ್ವಾಸ್ ಕರ್‍ತಲೆ ಸಗ್ಳೆ ಜಾನಾ ಬರಿ ಕಾಮಾ ಕರ್‍ತಲ್ಯಾ ಉಮೆಂದಿನ್ ಭರುಂದಿತ್. ಹ್ಯಾ ಗೊಸ್ಟಿಯಾ ಸಗ್ಳ್ಯಾ ಲೊಕಾಕ್ನಿ ಬರೆಪಾನಾಚಿ ಅನಿ ಫಾಯ್ದ್ಯಾಚೆ ಹೊವ್ನ್ ಹಾತ್. ಅಧ್ಯಾಯವನ್ನು ನೋಡಿ |