Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:17 - ಕನ್ನಡ ಸತ್ಯವೇದವು J.V. (BSI)

17 ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸುವದರಲ್ಲಿ ಪ್ರವೀಣನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರು ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಇವರುಗಳಿಗೆ ಅನೇಕ ಶಾಸ್ತ್ರಗಳನ್ನೂ ವಿಜ್ಞಾನವನ್ನೂ ಕಲಿಯುವ ಬುದ್ಧಿಸಾಮರ್ಥ್ಯಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸಬಲ್ಲವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:17
36 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ವಿವೇಕವನ್ನು ಬೇಡಿಕೊಂಡದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಮುಂಚೆ ಇರಲಿಲ್ಲ; ಮುಂದೆಯೂ ಇರುವದಿಲ್ಲ.


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.


ನನ್ನ ಪಿತೃಗಳ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ವ್ಯಕ್ತಗೊಳಿಸಿದಿ.


ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.


ಅವನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ಉಪದೇಶಹೊಂದಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥನಾದನು.


ಪಾರಸಿಯ ರಾಜನಾದ ಕೋರೆಷನ ಆಳಿಕೆಯ ಮೂರನೆಯ ವರುಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಬಹು ಕಷ್ಟದ ಗಡುವಿನ ಆ ಸಂಗತಿಯು ಸತ್ಯ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮಂದಟ್ಟುಮಾಡಿಕೊಂಡನು.


ಇಗೋ, ನೀನು ದಾನಿಯೇಲನಿಗಿಂತಲೂ ಬುದ್ಧಿವಂತನು; ನಿನಗೆ ಮರೆಯಾದ ಮರ್ಮವು ಯಾವದೂ ಇಲ್ಲ;


ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.


ಅವರು ಬಂದಾಗ ಆತನು - ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಕಾಣಿಸಿಕೊಳ್ಳುವೆನು, ಇಲ್ಲವೆ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.


ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಿಗೆ ಹಾಸಿಗೆಯ ಮೇಲೆ ಸ್ವಪ್ನವಾಯಿತು, ಅವನ ಮನಸ್ಸಿನಲ್ಲಿ ಕನಸುಬಿತ್ತು; ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದನು.


ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು -


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದುತ್ತಾನೆ.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಸಂತೋಷವನ್ನೂ ದಯಪಾಲಿಸುತ್ತಾನಲ್ಲವೆ; ಪಾಪಿಗಾದರೋ ತನ್ನ ಮೆಚ್ಚಿಕೆಯಾದವನಿಗೆ ಒದಗತಕ್ಕವುಗಳನ್ನು ಕೂಡಿಸಿಡುವ ಪ್ರಯಾಸವನ್ನೇ ನೇವಿುಸುತ್ತಾನೆ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ನಿನ್ನ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಹೋಗುತ್ತಾ ಬರುತ್ತಾ ಇರುವದಕ್ಕೋಸ್ಕರ ನನಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಬೇಕು ಎಂದು ದೇವರನ್ನು ಬೇಡಿಕೊಂಡನು.


ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೂರನೆಯ ವರುಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು.


ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.


ಇದಲ್ಲದೆ ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವದಿಲ್ಲ ಅಂದನು.


ಅಂಗದೋಷವಿಲ್ಲದವರೂ ಸುಂದರರೂ ಸಮಸ್ತಶಾಸ್ತ್ರಜ್ಞರೂ ಪಂಡಿತರೂ ವಿದ್ಯಾನಿಪುಣರೂ ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕೆಂಬದಾಗಿ ಅಪ್ಪಣೆಕೊಟ್ಟನು.


ರಾಜನು ನೇವಿುಸಿದ ಕಾಲವು ಕಳೆದು ಯುವಕರನ್ನು ಸನ್ನಿಧಿಗೆ ತರತಕ್ಕ ಸಮಯವು ಬಂದಾಗ ಕಂಚುಕಿಯರ ಅಧ್ಯಕ್ಷನು ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರತಂದನು.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂತಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದುಬರಲಿ ಎಂದು ಈ ರಹಸ್ಯವು ನನಗೆ ವ್ಯಕ್ತವಾಗಿದೆ.


ಆದದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರತರುವ ಹಾಗೆ ಆಜ್ಞಾಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು