Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:6 - ಕನ್ನಡ ಸತ್ಯವೇದವು J.V. (BSI)

6 ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗೆ ಆರಿಸಿಕೊಂಡ ಯುವಕರಲ್ಲಿ ದಾನಿಯೇಲನು, ಹನನ್ಯನು, ಮಿಶಾಯೇಲನು, ಅಜರ್ಯನು ಎಂಬ ಯೆಹೂದ್ಯರು ಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ತರುಣರಲ್ಲಿ ಯೆಹೂದ ಕುಲಕ್ಕೆ ಸೇರಿದವರಾದ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇವರಲ್ಲಿ ಯೆಹೂದದಿಂದ ದಾನಿಯೇಲ, ಹನನ್ಯ, ಮೀಶಾಯೇಲ್, ಅಜರ್ಯ ಎಂಬವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:6
10 ತಿಳಿವುಗಳ ಹೋಲಿಕೆ  

ನೋಹ ದಾನಿಯೇಲ ಯೋಬ ಎಂಬೀ ಮೂವರು ಪುರುಷರು ಅದರಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಕರ್ತನಾದ ಯೆಹೋವನ ನುಡಿ.


ಆದದರಿಂದ ಪ್ರವಾದಿಯಾದ ದಾನಿಯೇಲನು ಹೇಳಿದಂಥ ಹಾಳುಮಾಡುವ ಅಸಹ್ಯ ವಸ್ತುವು ಪವಿತ್ರಸ್ಥಾನದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ)


ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ ಆ ಸಮಾಚಾರವನ್ನು ತಿಳಿಸಿ


ನೊಹ ದಾನಿಯೇಲ ಯೋಬ ಎಂಬಿವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲೀ ಹೆಣ್ಣುಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ಇದಲ್ಲದೆ ಹಾಳುಮಾಡುವ ಅಸಹ್ಯ ವಸ್ತುವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ) ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ.


ಇಗೋ, ನೀನು ದಾನಿಯೇಲನಿಗಿಂತಲೂ ಬುದ್ಧಿವಂತನು; ನಿನಗೆ ಮರೆಯಾದ ಮರ್ಮವು ಯಾವದೂ ಇಲ್ಲ;


ರಾಜನು ಅವರ ಸಂಗಡ ಮಾತಾಡುವಾಗ ಆ ಸಮಸ್ತ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ, ಇವರ ಹಾಗೆ ಯಾರೂ ಕಂಡುಬರಲಿಲ್ಲ; ಆದಕಾರಣ ಅವರು ರಾಜನ ಸನ್ನಿಧಿಸೇವಕರಾದರು.


ಕೂಡಲೆ ಅರ್ಯೋಕನು ದಾನಿಯೇಲನನ್ನು ಸನ್ನಿಧಿಗೆ ತ್ವರೆಯಾಗಿ ಕರೆದುಕೊಂಡು ಹೋಗಿ - ರಾಜನೇ, ಕನಸಿನ ಅಭಿಪ್ರಾಯವನ್ನು ನಿನಗೆ ತಿಳಿಸಬಲ್ಲವನೊಬ್ಬನು ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ನನಗೆ ಸಿಕ್ಕಿದ್ದಾನೆ ಎಂದು ಅರಿಕೆಮಾಡಲು


ಆಗ ದಾನಿಯೇಲನನ್ನು ಸನ್ನಿಧಿಗೆ ಬರಮಾಡಲು ರಾಜನು ಅವನಿಗೆ - ರಾಜನಾದ ನನ್ನ ತಂದೆಯು ಯೆಹೂದದಿಂದ ಕೈದಿಗಳಾಗಿ ತಂದು ಸೆರೆಮಾಡಿದ ಯೆಹೂದ್ಯರ ದಾನಿಯೇಲೆಂಬವನು ನೀನೋ?


ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಪ್ರಯಾಸಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು