ದಾನಿಯೇಲ 1:7 - ಕನ್ನಡ ಸತ್ಯವೇದವು J.V. (BSI)7 ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕಂಚುಕಿಯರ ನಾಯಕನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ‘ಬೇಲ್ತೆಶಚ್ಚರ್’, ಹನನ್ಯನಿಗೆ ‘ಶದ್ರಕ್’, ಮಿಶಾಯೇಲನಿಗೆ ‘ಮೇಶಕ್’, ಹಾಗೂ ಅಜರ್ಯನಿಗೆ ‘ಅಬೇದ್ನೆಗೋ’, ಎಂಬ ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅಶ್ಪೆನಜನು ಆ ಯೆಹೂದ್ಯ ತರುಣರಿಗೆ ಬಾಬಿಲೋನಿನ ಹೆಸರುಗಳನ್ನಿಟ್ಟನು. ದಾನಿಯೇಲನ ಹೊಸ ಹೆಸರು ಬೇಲ್ತೆಶಚ್ಚರ್, ಹನನ್ಯನ ಹೊಸ ಹೆಸರು ಶದ್ರಕ್, ಮೀಶಾಯೇಲನ ಹೊಸ ಹೆಸರು ಮೇಶಕ್ ಮತ್ತು ಅಜರ್ಯನ ಹೊಸ ಹೆಸರು ಅಬೇದ್‌ನೆಗೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇವರಿಗೆ ಕಂಚುಕಿಯರ ಯಜಮಾನನು ದಾನಿಯೇಲನಿಗೆ ಬೇಲ್ತೆಶಚ್ಚರ್ ಎಂದೂ, ಹನನ್ಯನಿಗೆ ಶದ್ರಕ್ ಎಂದೂ, ಮೀಶಾಯೇಲನಿಗೆ ಮೇಶಕ್ ಎಂದೂ, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು. ಅಧ್ಯಾಯವನ್ನು ನೋಡಿ |