Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:13 - ಕನ್ನಡ ಸತ್ಯವೇದವು J.V. (BSI)

13 ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿವಸ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜನ ಸಂಗಡ [ಹೋರಾಡಿ]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪರ್ಷಿಯ ರಾಜ್ಯದ ಕಾವಲುದೂತನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಪ್ರಧಾನ ದೂತರಲ್ಲಿ ಒಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ಅಲ್ಲಿನ ಪರ್ಷಿಯ ರಾಜರ ಸಂಗಡ ಹೋರಾಡಲು ಅವನನ್ನು ಬಿಟ್ಟು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಪಾರಸಿಯ ರಾಜ್ಯದ ದಿವ್ಯಪಾಲಕನು ನನ್ನೊಂದಿಗೆ ಕಳೆದ ಇಪ್ಪತ್ತೊಂದು ದಿನಗಳಿಂದ ಹೋರಾಡುತ್ತಿದ್ದನು; ನನಗೆ ತೊಂದರೆ ಕೊಡುತ್ತಿದ್ದನು. ಆಗ ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ನಾನು ಅಲ್ಲಿ ಪಾರಸಿಯ ರಾಜನ ಹತ್ತಿರ ಸಿಕ್ಕಿಹಾಕಿಕೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಪಾರಸಿಯ ರಾಜ್ಯದ ರಾಜಪುತ್ರನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು. ಏಕೆಂದರೆ ನಾನು ಆ ಪಾರಸಿಯ ಅರಸನಿಂದ ತಡೆಹಿಡಿಯಲಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:13
11 ತಿಳಿವುಗಳ ಹೋಲಿಕೆ  

ಆದರೆ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದಮಾಡಿದಾಗ ಅವನು ಸೈತಾನನ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಕ್ಕೆ ಧೈರ್ಯಗೊಳ್ಳದೆ - ಕರ್ತನು ನಿನ್ನನ್ನು ಖಂಡಿಸಲಿ ಅಂದನು.


ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ಮೀಕಾಯೇಲನು ಆ ಕಾಲದಲ್ಲಿ ಏಳುವನು; ಮೊಟ್ಟ ಮೊದಲು ಜನಾಂಗವು ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದಂಥ ಸಂಕಟವು ಸಂಭವಿಸುವದು; ಆಗ ನಿನ್ನ ಜನರೊಳಗೆ ಯಾರ ಹೆಸರುಗಳು [ಜೀವಬಾಧ್ಯರ] ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡುವದಕ್ಕೆ ಹೊರಟರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು,


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಯಾಕಂದರೆ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.


ಮತ್ತು ನೀವು ಆತನಲ್ಲಿದ್ದುಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.


ನಾವು ಹೋರಾಡುವದು ಮನುಷ್ಯ ಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.


ಅಂದಿನಿಂದ ಪಾರಸಿಯ ರಾಜನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದವರೆಗೂ ಯೆರೂಸಲೇವಿುನ ದೇವಾಲಯವನ್ನು ಕಟ್ಟುವ ಕೆಲಸವು ನಿಂತು ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು