Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:15 - ಕನ್ನಡ ಸತ್ಯವೇದವು J.V. (BSI)

15 ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವನು ಈ ಮಾತನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ನಿಶ್ಶಬ್ದನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಪುರುಷನು ನನ್ನೊಂದಿಗೆ ಮಾತನಾಡುತ್ತಿದ್ದಾಗ ನಾನು ನೆಲವನ್ನು ನೋಡುತ್ತಾ ಬಾಗಿಕೊಂಡಿದ್ದೆ. ಮಾತನಾಡಲು ನನ್ನಿಂದ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ನನಗೆ ಈ ಮಾತುಗಳನ್ನು ಹೇಳುತ್ತಿದ್ದಾಗ, ನಾನು ನನ್ನ ಮುಖವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:15
6 ತಿಳಿವುಗಳ ಹೋಲಿಕೆ  

ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವದು; ಆದರೆ ನೀನು ಅದನ್ನು ನಂಬದೆಹೋದದ್ದರಿಂದ ಅದೆಲ್ಲಾ ಸಂಭವಿಸುವ ದಿನದವರೆಗೂ ಮಾತನಾಡಲಾರದೆ ಮೂಕನಾಗಿರುವಿ ಎಂದು ಅವನಿಗೆ ಉತ್ತರಕೊಟ್ಟನು.


ಆ ದಿನದಲ್ಲಿ ತಪ್ಪಿಸಿಕೊಂಡವನಿಗಾಗಿ ನೀನು ಬಾಯಿಬಿಡುವಿ, ನಿನ್ನ ಮೂಕತನವನ್ನು ಕಳಕೊಂಡು ಮಾತಾಡುವಿ; ಹೀಗೆ ನೀನು ಅವರಿಗೆ ಗುರುತಾಗಲು ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಆದರೂ ಅವನು ಮಾತಾಡುವ ಸದ್ದನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಅಡಿಮೊಗವಾಗಿ ಅಡ್ಡಬಿದ್ದಿದ್ದೆನು.


ಅವನು ನನ್ನೊಡನೆ ಮಾತಾಡುತ್ತಿರುವಲ್ಲಿ ನಾನು ಮೈಮರೆತು ಅಡಿಮೊಗವಾಗಿ ಬಿದ್ದಿದ್ದೆನು; ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ -


ಅವನು ಬರುವದಕ್ಕೆ ಹಿಂದಿನ ಸಾಯಂಕಾಲ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಯೆಹೋವನು ಆ ಪಲಾಯಿತನು ಬೆಳಿಗ್ಗೆ ಬರುವನೆಂದು ನನ್ನ ಬಾಯನ್ನು ಬಿಚ್ಚಿದ್ದನು; ಹೌದು, ನನ್ನ ಬಾಯಿ ಬಿಚ್ಚಿತು, ನನ್ನ ಮೂಕತನವು ಹೋಯಿತು.


ಇದಲ್ಲದೆ ನಿನ್ನ ನಾಲಿಗೆಯು ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸದಿರುವಿ; ಅವರು ದ್ರೋಹಿವಂಶದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು