ದಾನಿಯೇಲ 10:16 - ಕನ್ನಡ ಸತ್ಯವೇದವು J.V. (BSI)16 ಇಗೋ, ನರರೂಪಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ - ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರವಿುಸಿವೆ, ನಿತ್ರಾಣನಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ಮನುಷ್ಯಕುಮಾರನಂತಿರುವವನು ನನ್ನ ತುಟಿಗಳನ್ನು ಸ್ಪರ್ಶಿಸಿದನು. ನಾನು ಬಾಯಿ ತೆರೆದು ಮಾತನಾಡಲು ಪ್ರಾರಂಭಿಸಿದೆ. ನನ್ನ ಎದುರಿಗೆ ನಿಂತುಕೊಂಡಿದ್ದವನಿಗೆ, “ಸ್ವಾಮಿ, ದರ್ಶನದಲ್ಲಿ ನೋಡಿದ ಸಂಗತಿಗಳಿಂದ ನಾನು ಚಿಂತಾಕ್ರಾಂತನಾಗಿದ್ದೇನೆ; ಅಂಜಿಕೊಂಡಿದ್ದೇನೆ; ನಿಸ್ಸಹಾಯಕನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಮಾನವನಂತೆ ಇರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ನಾನು ಬಾಯಿತೆರೆದು ಮಾತನಾಡಿ, ನನ್ನ ಮುಂದೆ ನಿಂತಿದ್ದವನಿಗೆ, “ನನ್ನ ಒಡೆಯನೇ, ಆ ದರ್ಶನದ ನಿಮಿತ್ತ, ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ, ನಾನು ನಿತ್ರಾಣನಾಗಿದ್ದೇನೆ. ಅಧ್ಯಾಯವನ್ನು ನೋಡಿ |
ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!