Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:3 - ಕನ್ನಡ ಸತ್ಯವೇದವು J.V. (BSI)

3 ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ, ಮಾಂಸವನ್ನೂ ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ, ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಮೂರು ವಾರ ಮುಗಿಯುವ ತನಕ ನಾನು ಯಾವ ರುಚಿಪದಾರ್ಥವನ್ನೂ ತಿನ್ನಲಿಲ್ಲ. ಮಾಂಸವನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಬಾಯಲ್ಲಿ ಇಡಲಿಲ್ಲ. ಎಣ್ಣೆಯನ್ನೂ ಹಚ್ಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಮೂರು ವಾರಗಳಲ್ಲಿ ನಾನು ಇಷ್ಟಪಡುತ್ತಿದ್ದ ಆಹಾರವನ್ನು ತಿನ್ನಲಿಲ್ಲ; ಮಾಂಸಾಹಾರವನ್ನು ಸೇವಿಸಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ; ತಲೆಗೆ ಎಣ್ಣೆಯನ್ನು ಹಾಕಿಕೊಳ್ಳಲಿಲ್ಲ. ಮೂರು ವಾರಗಳವರೆಗೆ ಇದೆಲ್ಲವನ್ನು ನಾನು ನಿಲ್ಲಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:3
11 ತಿಳಿವುಗಳ ಹೋಲಿಕೆ  

ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳಕೋ.


ನೀವು ಬಡವರನ್ನು ತುಳಿದು ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ ವಾಸಿಸದೆ ಇರುವಿರಿ, ಮಾಡಿಕೊಂಡ ಒಳ್ಳೊಳ್ಳೆಯ ತೋಟಗಳ ದ್ರಾಕ್ಷಾರಸವನ್ನು ಕುಡಿಯರಿ.


ಅವನ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಐಗುಪ್ತಕ್ಕೆ ಬಂದು ಕೆಲವು ವರುಷಗಳ ತನಕ ಉತ್ತರರಾಜನ ತಂಟೆಗೆ ಹೋಗುವದಿಲ್ಲ.


ಇತರರನ್ನು ಹೋರಾಟಕ್ಕೆ ಕರೆದ ಮೇಲೆ ನಾನೇ ಅಯೋಗ್ಯನೆನಿಸಿಕೊಂಡೇನೋ ಎಂಬ ಭಯದಿಂದ ನನ್ನ ಮೈಯನ್ನು ಜಜ್ಜಿ ಸ್ವಾಧೀನ ಪಡಿಸಿಕೊಳ್ಳುತ್ತೇನೆ.


ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧ ಶ್ರೇಷ್ಠವಸ್ತುಗಳ ನಿಧಿಗೂ ಪಾರವೇ ಇಲ್ಲ.


ಅನಂತರ ರಾಜನು ಅರಮನೆಗೆ ಹೋಗಿ ವಿನೋದ ವಾದ್ಯಗಳನ್ನು ತನ್ನ ಮುಂದೆ ತರಿಸದೆ ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆತಪ್ಪಿತು.


ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವದು, ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವದು.


ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವದಕ್ಕೆ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಕಾಲುಗಳನ್ನು ಕಟ್ಟಿಕೊಂಡಿದ್ದಿಲ್ಲ, ಮೀಸೆಯನ್ನು ಕತ್ತರಿಸಿದ್ದಿಲ್ಲ, ಬಟ್ಟೆಗಳನ್ನು ಒಗೆಸಿಕೊಂಡಿದ್ದಿಲ್ಲ,


ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧತೈಲವನ್ನು ಕಾಲಿಗೆ ಹಚ್ಚಿದಳು.


ಆಮೇಲೆ ಅವನು ನನಗೆ - ದಾನಿಯೇಲನೇ, ಭಯಪಡಬೇಡ, ನೀನು [ದೈವಸಂಕಲ್ಪವನ್ನು] ವಿಮರ್ಶಿಸುವದಕ್ಕೂ ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿವಿುತ್ತವೇ ನಾನು ಬಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು