Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:5 - ಕನ್ನಡ ಸತ್ಯವೇದವು J.V. (BSI)

5 ಕಣ್ಣೆತ್ತಿ ನೋಡಲು ಇಗೋ, ನಾರಿನ ಬಟ್ಟೆಯನ್ನು ಹೊದ್ದುಕೊಂಡು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡ ಒಬ್ಬ ಪುರುಷನು ನನಗೆ ಕಾಣಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಟೈಗ್ರಿಸ್ ಮಹಾನದಿಯ ದಡದ ಮೇಲೆ ಇದ್ದು ಕಣ್ಣೆತ್ತಿ ನೋಡಲು ಇಗೋ, ನಾರಿನ ಬಟ್ಟೆಯನ್ನು ಹೊದ್ದುಕೊಂಡು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡ ಒಬ್ಬ ಪುರುಷನು ನನಗೆ ಕಾಣಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಣ್ಣೆತ್ತಿ ನೋಡಲು, ನಾರುಬಟ್ಟೆಯನ್ನು ಹೊದ್ದುಕೊಂಡಿದ್ದ, ಊಫಜಿನ ಬಂಗಾರದ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದ, ಒಬ್ಬ ವ್ಯಕ್ತಿ ನನಗೆ ಕಾಣಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಲ್ಲಿ ನಿಂತುಕೊಂಡಿದ್ದಾಗ ನಾನು ಮುಖವೆತ್ತಿ ನೋಡಿದೆ. ನನ್ನ ಎದುರಿಗೆ ಒಬ್ಬ ವ್ಯಕ್ತಿಯು ನಿಂತಿದ್ದನ್ನು ಕಂಡೆ. ಅವನು ನಾರುಬಟ್ಟೆಯನ್ನು ಧರಿಸಿಕೊಂಡಿದ್ದನು. ಅವನು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು. ಆಗ, ನಾರುಮಡಿಯನ್ನು ಧರಿಸಿದ್ದ ಒಬ್ಬ ಮನುಷ್ಯನನ್ನು ಕಂಡೆನು. ಆತನ ನಡುವು ಊಫಜಿನ ಅತ್ಯುತ್ತಮ ಬಂಗಾರದಿಂದ ಬಿಗಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:5
9 ತಿಳಿವುಗಳ ಹೋಲಿಕೆ  

ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.


ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವು ಊಫಜಿನಿಂದಲೂ ಸಾಗಿಬರುತ್ತವೆ; ನೀಲಧೂಮ್ರವಸ್ತ್ರಗಳು ಅವುಗಳ ಉಡುಪಾಗಿವೆ; ಇವೆಲ್ಲಾ ಕುಶಲರ ಕೌಶಲ್ಯ.


ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿದ್ದಾಗ ಒಂದಾನೊಂದು ದಿನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವದನ್ನು ಕಂಡನು. ಅವನು ಅವನ ಬಳಿಗೆ ಹೋಗಿ - ನೀನು ನಮ್ಮವನೋ ಅಥವಾ ಶತ್ರುಪಕ್ಷದವನೋ ಎಂದು ಕೇಳಲು


ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಧರಿಸಿಕೊಂಡು


ರಾತ್ರಿಯಲ್ಲಿ ನನಗೆ ದರ್ಶನವಾಯಿತು - ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳಿ ಕುದುರೆಗಳನ್ನು ಹತ್ತಿದವರಿದ್ದರು.


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು