ದಾನಿಯೇಲ 11:13 - ಕನ್ನಡ ಸತ್ಯವೇದವು J.V. (BSI)13 ತರುವಾಯ ಉತ್ತರರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹುವರುಷಗಳ ಕಾಲವಾದ ನಂತರ ಮಹಾಸೈನ್ಯದಿಂದಲೂ ಅಧಿಕಸನ್ನಾಹದಿಂದಲೂ ಸಮೇತನಾಗಿ ಬರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತರುವಾಯ ಉತ್ತರ ದಿಕ್ಕಿನ ರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿ ಬಹಳ ವರ್ಷಗಳ ನಂತರ ಮಹಾ ಸೈನ್ಯದಿಂದಲೂ, ಅಧಿಕ ಆಯುಧಗಳ ಸಮೇತವಾಗಿಯೂ ಬರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ತರುವಾಯ ಉತ್ತರರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿಕೊಂಡು ಬಹಳ ವರ್ಷಗಳು ಕಳೆದನಂತರ ಮಹಾಸೈನ್ಯ ಸಮೇತ ಅಧಿಕ ಸನ್ನಾಹದಿಂದ ಬರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಉತ್ತರದ ರಾಜನು ಇನ್ನೊಂದು ಸೈನ್ಯವನ್ನು ತೆಗೆದುಕೊಂಡು ಬರುವನು. ಈ ಸೈನ್ಯವು ಮೊದಲಿನ ಸೈನ್ಯಕ್ಕಿಂತ ದೊಡ್ಡದಾಗಿರುವದು. ಬಹಳ ವರ್ಷಗಳ ತರುವಾಯ ಅವನು ಧಾಳಿಮಾಡುವನು. ಆ ಸೈನ್ಯವು ಬಹಳ ದೊಡ್ಡದಾಗಿದ್ದು ಹಲವಾರು ಆಯುಧಗಳಿಂದ ಸುಸಜ್ಜಿತವಾಗಿರುವದು. ಆ ಸೈನ್ಯವು ಯುದ್ಧಕ್ಕೆ ಸಿದ್ಧವಾಗಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಏಕೆಂದರೆ ಉತ್ತರದ ಅರಸನು ಪುನಃ ತಿರುಗಿಕೊಂಡು ಮೊದಲನೆಯದಕ್ಕಿಂತಲೂ ದೊಡ್ಡ ಸೈನ್ಯವನ್ನು ನಿಲ್ಲಿಸಿ, ಕೆಲವು ವರ್ಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ, ಬಹಳ ಆಯುಧಗಳ ಸಂಗಡವೂ ನಿಶ್ಚಯವಾಗಿ ಬರುವನು. ಅಧ್ಯಾಯವನ್ನು ನೋಡಿ |