Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:16 - ಕನ್ನಡ ಸತ್ಯವೇದವು J.V. (BSI)

16 ದಕ್ಷಿಣರಾಜನಿಗೆ ವಿರುದ್ಧವಾಗಿ ಬರುವವನು ಇಚ್ಫಾನುಸಾರ ನಡೆಯುವನು; ಅವನಿಗೆ ಎದುರೇ ಇಲ್ಲ; ನಾಶನವನ್ನು ಕೈಯಲ್ಲಿಟ್ಟುಕೊಂಡು ಅಂದಚಂದದ ದೇಶದಲ್ಲಿ ನಿಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರು ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದಕ್ಷಿಣದರಾಜನಿಗೆ ವಿರುದ್ಧ ಬರುವವನು ಇಚ್ಛಾನುಸಾರ ವರ್ತಿಸುವನು. ಅವನನ್ನು ಎದುರಿಸಬಲ್ಲವನು ಒಬ್ಬನೂ ಇರನು. ಆ ‘ಚೆಲುವಿನ ನಾಡನ್ನೂ’ ಗೆದ್ದು ಅದನ್ನು ಪೂರ್ತಿಯಾಗಿ ತನ್ನ ಕೈಹಿಡಿತದಲ್ಲಿ ಇಟ್ಟುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಉತ್ತರದ ರಾಜನು ತನ್ನ ಇಷ್ಟಬಂದಂತೆ ಮಾಡುವನು. ಯಾರಿಂದಲೂ ಅವನನ್ನು ತಡೆಯಲು ಸಾಧ್ಯವಾಗುವದಿಲ್ಲ. ಅವನು ಸುಂದರವಾದ ನಾಡಿನ ಮೇಲೆ ಅಧಿಕಾರವನ್ನೂ ನಿಯಂತ್ರಣವನ್ನೂ ಸಂಪಾದಿಸುವನು. ಅದನ್ನು ನಾಶಮಾಡುವ ಸಾಮರ್ಥ್ಯವನ್ನು ಹೊಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು. ಯಾರೂ ಅವನ ಮುಂದೆ ನಿಲ್ಲಲಾರರು. ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದನ್ನು ನಾಶಮಾಡುವ ಅಧಿಕಾರ ಹೊಂದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:16
11 ತಿಳಿವುಗಳ ಹೋಲಿಕೆ  

ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ತೆಂಕಲಲ್ಲಿಯೂ ಮೂಡಲಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.


ಅಂದಚಂದದ ದೇಶಕ್ಕೂ ನುಗ್ಗುವನು; ಅನೇಕ ಸೀಮೆಗಳು ಅವನಿಂದ ಹಾಳಾಗುವವು; ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಇವರುಗಳು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.


ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾಪ್ರಭುತ್ವದಿಂದ ಆಳುತ್ತಾ ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.


ಅದು ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ ಅದರ ಮೇಲಣ ಕ್ರೋಧದಿಂದುರಿಯುತ್ತಾ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು; ಅದಕ್ಕೆ ಎದುರುಬೀಳಲು ಟಗರಿಗೆ ಏನೂ ಶಕ್ತಿಯಿರಲಿಲ್ಲ; ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದುಹಾಕಿತು; ಟಗರನ್ನು ಅದರ ಕೈಯಿಂದ ಬಿಡಿಸುವ ಪ್ರಾಣಿ ಯಾವದೂ ಇರಲಿಲ್ಲ;


ನಾನು ನೋಡುತ್ತಿದ್ದ ಹಾಗೆ ಆ ಟಗರು ಪಡುವಲಿಗೂ ಬಡಗಲಿಗೂ ತೆಂಕಲಿಗೂ ಹಾದಾಡುತ್ತಿತ್ತು; ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು; ಅದರ ಕೈಯಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ; ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.


ಸಮುದ್ರಕ್ಕೂ ಅಂದಚಂದದ ಪರಿಶುದ್ಧಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು; ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯಮಾಡರು.


ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಎಣಿಸಿ ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತಜನಾಂಗಗಳ ಬಾಧ್ಯಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ತಂದೆಯೆನ್ನುವಿ ಅಂದುಕೊಂಡೆನು.


ಅದು ತನ್ನ ಪಾತ್ರವನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ ಯೆಹೂದದಲ್ಲಿಯೂ ನುಗ್ಗಿ ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವದು; ಇಮ್ಮಾನುವೇಲನೇ! ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲದಲ್ಲೆಲ್ಲಾ ಮುತ್ತಿಬಿಡುವವು.


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನು.


ಈ ಮಹತ್ವ ವರದ ನಿವಿುತ್ತ ಸಕಲ ಜನಾಂಗಕುಲಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ಬೇಕುಬೇಕಾದವರನ್ನು ಕೊಲ್ಲಿಸಿದನು, ಬೇಕುಬೇಕಾದವರನ್ನು ಉಳಿಸಿದನು, ಮನಸ್ಸುಬಂದವರನ್ನು ಏರಿಸಿದನು, ಮನಸ್ಸುಬಂದವರನ್ನು ಇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು