Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:21 - ಕನ್ನಡ ಸತ್ಯವೇದವು J.V. (BSI)

21 ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು ನೆಮ್ಮದಿಯ ಕಾಲದಲ್ಲಿ ಬಂದು ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು, ನೆಮ್ಮದಿಯ ಕಾಲದಲ್ಲಿ ಬಂದು ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಅವನ ಸ್ಥಾನದಲ್ಲಿ ನೀಚನೊಬ್ಬನು ಏಳುವನು. ಅವನು ರಾಜಪದವಿಗೆ ಹಕ್ಕುದಾರನಲ್ಲ. ಆದರೂ ನೆಮ್ಮದಿಯ ಕಾಲದಲ್ಲಿ ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಆ ರಾಜನ ತರುವಾಯ ಅತಿ ಕ್ರೂರನೂ ದ್ವೇಷಮಯಿಯೂ ಆದ ಒಬ್ಬನು ರಾಜನಾಗುವನು. ಅವನು ರಾಜ ಮನೆತನದವನಾಗಿರುವದಿಲ್ಲ. ಅವನು ವಂಚನೆಯಿಂದ ರಾಜನಾಗಿರುತ್ತಾನೆ. ಜನರು ನೆಮ್ಮದಿಯಿಂದ ನಿರ್ಭಯರಾಗಿರುವಾಗ ಅವನು ರಾಜ್ಯದ ಮೇಲೆ ಧಾಳಿ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು. ಅವನಿಗೆ ರಾಜಮರ್ಯಾದೆಯನ್ನು ಕೊಡುವುದಿಲ್ಲ. ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:21
17 ತಿಳಿವುಗಳ ಹೋಲಿಕೆ  

ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆಮೇಲೆ ಬಹುಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.


ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸಿ ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.


ಅವನ ಬಾಯಿ ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯವೇ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚುಕತ್ತಿಗಳೇ ಸರಿ.


[ಅಶ್ಶೂರವೇ,] ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಗೋರಿಯನ್ನು ಸಿದ್ಧಮಾಡುವೆನು; ನೀನು ತುಚ್ಫ,


ನಿಬಂಧನದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು; ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.


ಅವನ ಸ್ಥಾನದಲ್ಲಿ ಮತ್ತೊಬ್ಬನು ಎದ್ದು ರಾಜ್ಯದಲ್ಲಿ ಶಿರೋಮಣಿಯಾದ ದೇಶವನ್ನೆಲ್ಲ ದೋಚಿಕೊಳ್ಳತಕ್ಕವನನ್ನು ನೇವಿುಸುವನು; ಆಹಾ, ಕೆಲವು ದಿನಗಳೊಳಗೆ ನಾಶವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧದಿಂದಲೂ ಅಲ್ಲ.


ಅನಂತರ ಅವಳು ಹುಟ್ಟಿದ ಬುಡದಿಂದ ಒಡೆದ ಸಸಿಯು ಅದರ ಸ್ಥಾನದಲ್ಲಿ ನಿಂತು ಉತ್ತರರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ ಅಲ್ಲಿನವರಿಗೆ ಮಾಡುವಷ್ಟು ಮಾಡಿ ಗೆದ್ದು


ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿನಮುಖನೂ ದ್ವಂದ್ವಾರ್ಥವಚನನಿಪುಣನು ಆದ ಒಬ್ಬ ರಾಜನು ತಲೆದೋರುವನು.


ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ತೆಂಕಲಲ್ಲಿಯೂ ಮೂಡಲಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.


ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಲ್ಲಿ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು; ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.


ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸನು.


ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ನೀನು ನಮ್ಮನ್ನು ಅವರಿಂದ ತಪ್ಪಿಸಿ ಕಾಪಾಡುವಿ; ಸದಾಕಾಲವೂ ನಮ್ಮನ್ನು ಕಾಯುವಿ.


ತನ್ನ ಮಕ್ಕಳು ದೇವದೂಷಕರೆಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿವಿುತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ಇದು ಅನಿವಿುಷರ ತೀರ್ಮಾನ, ದೇವರ ತೀರ್ಪು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇವಿುಸುತ್ತಾನೆಂಬದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು ಎಂದು ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು