ದಾನಿಯೇಲ 11:33 - ಕನ್ನಡ ಸತ್ಯವೇದವು J.V. (BSI)33 ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ ಅವರು ಬಹು ದಿವಸ ಕತ್ತಿ ಬೆಂಕಿ ಸೆರೆಸೂರೆಗಳಿಗೆ ಸಿಕ್ಕಿಬೀಳುತ್ತಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಜನರಲ್ಲಿನ ಬುದ್ಧಿವಂತ ನಾಯಕರು ಅನೇಕರಿಗೆ ಬುದ್ಧಿಹೇಳುವರು. ಕೆಲಕಾಲ ಅವರು ಕತ್ತಿ-ಬೆಂಕಿ-ಸೆರೆ-ಸೂರೆಗಳಿಗೆ ತುತ್ತಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ಜ್ಞಾನಿಗಳಾದ ಯೆಹೂದ್ಯರು ಏನು ನಡೆದಿದೆ ಎಂಬುದನ್ನು ತಿಳಿದುಕೊಳ್ಳಲು ಜನರಿಗೆ ಸಹಾಯ ಮಾಡುವರು. ಜ್ಞಾನಿಗಳಾದವರು ಸಹ ಅನೇಕ ಹಿಂಸೆಗಳಿಗೆ ತುತ್ತಾಗುವರು. ಕೆಲವು ಜನ ಜ್ಞಾನಿಗಳು ಕತ್ತಿಯಿಂದ ಕೊಲ್ಲಲ್ಪಡುವರು, ಕೆಲವರನ್ನು ಬೆಂಕಿಯಲ್ಲಿ ಹಾಕಲಾಗುವದು ಅಥವಾ ಬಂಧಿಸಲಾಗುವುದು. ಕೆಲವು ಯೆಹೂದ್ಯರ ಮನೆಯನ್ನು, ಆಸ್ತಿಪಾಸ್ತಿಯನ್ನು ಕಿತ್ತುಕೊಳ್ಳಲಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದರೂ ಖಡ್ಗದಿಂದಲೂ ಬೆಂಕಿಯಿಂದಲೂ ಸೆರೆಯಿಂದಲೂ ಕೊಳ್ಳೆಯಿಂದಲೂ ಕೆಲಕಾಲ ಸಿಕ್ಕಿ ಬೀಳುವರು. ಅಧ್ಯಾಯವನ್ನು ನೋಡಿ |
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.