Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:36 - ಕನ್ನಡ ಸತ್ಯವೇದವು J.V. (BSI)

36 ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:36
47 ತಿಳಿವುಗಳ ಹೋಲಿಕೆ  

ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲದ್ದೇ.


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ ಕರ್ತರ ಕರ್ತನಾಗಿಯೂ ಇದ್ದಾನೆ; ಆತನು ಪರಮದೇವರೂ ಪರಾಕ್ರವಿುಯೂ ಭಯಂಕರನೂ ಆಗಿದ್ದಾನೆ. ಆತನು ದಾಕ್ಷಿಣ್ಯ ನೋಡುವವನಲ್ಲ, ಲಂಚತೆಗೆದುಕೊಳ್ಳುವವನಲ್ಲ.


ದಕ್ಷಿಣರಾಜನಿಗೆ ವಿರುದ್ಧವಾಗಿ ಬರುವವನು ಇಚ್ಫಾನುಸಾರ ನಡೆಯುವನು; ಅವನಿಗೆ ಎದುರೇ ಇಲ್ಲ; ನಾಶನವನ್ನು ಕೈಯಲ್ಲಿಟ್ಟುಕೊಂಡು ಅಂದಚಂದದ ದೇಶದಲ್ಲಿ ನಿಂತಿರುವನು.


ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ನೀನು ನಿನ್ನ ಮನಸ್ಸಿನಲ್ಲಿ - ನಾನು ಆಕಾಶಕ್ಕೆ ಹತ್ತಿ ಉತ್ತರದಿಕ್ಕಿನ ಕಟ್ಟಕಡೆಯಿರುವ ಸುರಗಣ ಪರ್ವತದಲ್ಲಿ ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಮೇಲೆ ಏರಿಸಿ ಆಸೀನನಾಗುವೆನು;


ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು - ಇನ್ನು ಸಾವಕಾಶವಿರುವದಿಲ್ಲ; ಏಳನೆಯ ದೇವದೂತನು ಶಬ್ದ ಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ಸಂಕಲ್ಪವನ್ನು ತನ್ನ ದಾಸರಾದ ಪ್ರವಾದಿಗಳಿಗೆ ಶುಭವರ್ತಮಾನವಾಗಿ ತಿಳಿಸಿದ್ದ ಪ್ರಕಾರ ನೆರವೇರಿಸುವನು ಎಂದು ಹೇಳಿದನು.


ಬಹು ಸ್ವಲ್ಪ ಕಾಲದೊಳಗೆ [ನಿಮ್ಮ ಮೇಲಿನ] ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾಗುವದು.


ದೇವಾಧಿದೇವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ಕೃಪೆಯು ಶಾಶ್ವತವಾದದ್ದು.


ಯಾಕಂದರೆ ಅವರು ದೇವರ ಅಭಿಪ್ರಾಯವನ್ನು ನೆರವೇರಿಸುವದಕ್ಕೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವದಕ್ಕೂ ದೇವರು ತನ್ನ ವಚನವು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರಿಸಿದನು.


ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು. ಅಲ್ಲಿ ನಾನು ರಕ್ತವರ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು; ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ತುಂಬಿದ್ದವು.


ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಗರುಡಪಕ್ಷಿಯ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಒಂದು ಕಾಲ, ಎರಡು ಕಾಲ, ಅರ್ಧಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇವಿುಸಿದ್ದನ್ನೇ ನಡಿಸಿದರು.


ನನ್ನ ಚಿತ್ತದಂತೆ ನಡೆಯುವದಕ್ಕಾಗಿ ನಾನು ಬಂದಿಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವದಕ್ಕೆ ಪರಲೋಕದಿಂದ ಬಂದೆನು. ನನ್ನನ್ನು ಕಳುಹಿಸಿದಾತನ ಚಿತ್ತವು ಏನಂದರೆ ಆತನು


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ತಂದೆ ಹೇಳಿದ್ದನ್ನು ಕೇಳಿ ನ್ಯಾಯತೀರಿಸುತ್ತೇನೆ; ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ಅಪೇಕ್ಷಿಸುವದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.


ಆಕಾಶದ ಕಡೆಗೆ ಎತ್ತಿಕೊಂಡು - ಶಾಶ್ವತ ಜೀವಸ್ವರೂಪನಾಣೆ, ಒಂದುಕಾಲ ಎರಡುಕಾಲ ಅರ್ಧಕಾಲ ಕಳೆಯಬೇಕು; ದೇವರ ಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು ಎಂಬದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾಪ್ರಭುತ್ವದಿಂದ ಆಳುತ್ತಾ ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.


ನಾನು ನೋಡುತ್ತಿದ್ದ ಹಾಗೆ ಆ ಟಗರು ಪಡುವಲಿಗೂ ಬಡಗಲಿಗೂ ತೆಂಕಲಿಗೂ ಹಾದಾಡುತ್ತಿತ್ತು; ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು; ಅದರ ಕೈಯಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ; ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.


ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಲ್ಲಿ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು; ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ;


ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಿಲು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ; ಯೆಹೋವನ ಸಂಕಲ್ಪವೇ ಈಡೇರುವದು.


ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ಇದಕ್ಕೆ ಸಾಕ್ಷಿ; ದೇವದೇವನಾದ ಯೆಹೋವನಿಗೆ ಇದು ಗೊತ್ತುಂಟು. ಇಸ್ರಾಯೇಲ್ಯರಿಗೂ ಗೊತ್ತಾಗುವದು. ನಾವು ದ್ರೋಹಿಗಳೂ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರೂ ಆಗಿದ್ದರೆ ಆತನು ನಮ್ಮನ್ನು ಈ ಹೊತ್ತೇ ಕೈಬಿಡಲಿ.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ; ಯಾಕಂದರೆ ಮೊದಲು ಮತಭ್ರಷ್ಟತೆಯು ಉಂಟಾಗಿ ಅಧರ್ಮಸ್ವರೂಪನು ಬೈಲಿಗೆ ಬಂದ ಹೊರತು ಆ ದಿನವು ಬರುವದಿಲ್ಲ.


ಅವನು ತೆಗೆದುಬಿಡಲ್ಪಟ್ಟ ಕೂಡಲೆ ಆ ಅಧರ್ಮಸ್ವರೂಪನು ಕಾಣಬರುವನು; ಅವನನ್ನು ಯೇಸು ಕರ್ತನು ತನ್ನ ಬಾಯ ಉಸುರಿನಿಂದ ಕೊಲ್ಲುವನು, ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ಸಂಹರಿಸುವನು.


ಸಮುದ್ರದಿಂದ ಮೃಗವು ಏರಿಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಮಕುಟಗಳೂ ತಲೆಗಳ ಮೇಲೆ ದೇವದೂಷಣನಾಮಗಳೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು;


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಹೆಚ್ಚು ಹರಟೆಗಳನ್ನು ಕೇಳಿದ್ದೇನೆ.


ಈ ಮಹತ್ವ ವರದ ನಿವಿುತ್ತ ಸಕಲ ಜನಾಂಗಕುಲಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ಬೇಕುಬೇಕಾದವರನ್ನು ಕೊಲ್ಲಿಸಿದನು, ಬೇಕುಬೇಕಾದವರನ್ನು ಉಳಿಸಿದನು, ಮನಸ್ಸುಬಂದವರನ್ನು ಏರಿಸಿದನು, ಮನಸ್ಸುಬಂದವರನ್ನು ಇಳಿಸಿದನು.


ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;


ಅವನು ತನ್ನ ಪಿತೃಗಳ ದೇವರುಗಳನ್ನಾಗಲಿ ಸ್ತ್ರೀಯರು ಮೋಹಿಸುವ ದೇವರನ್ನಾಗಲಿ ಯಾವ ದೇವರನ್ನಾಗಲಿ ಲಕ್ಷಿಸನು. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.


ಆಹಾ, ಅಶ್ಶೂರವೇ, ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೋಷವೇ!


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಲಯವನ್ನು ಉಂಟುಮಾಡುವನಷ್ಟೆ.


ಉನ್ನತ ಮೇಘಮಂಡಲದ ಮೇಲೆ ಏರಿ ಉನ್ನತೋನ್ನತನಿಗೆ ಸರಿಸಮಾನನಾಗುವೆನು ಅಂದುಕೊಂಡಿದ್ದೆಯಲ್ಲಾ!


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.


ಬಹು ಸುಗಂಧದ್ರವ್ಯಗಳನ್ನು ಕೂಡಿಸಿ ತೈಲವನ್ನೂ ತೆಗೆದುಕೊಂಡು ಪರರಾಜನ ಬಳಿಗೆ ಪ್ರಯಾಣಮಾಡಿದ್ದೀ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದೀ. ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದೀ.


ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.


ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ಏರ್ಪಡಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರುಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು