Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:4 - ಕನ್ನಡ ಸತ್ಯವೇದವು J.V. (BSI)

4 ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ [ನಾಲ್ಕು] ಪಾಲಾಗುವದು; ಅದು ಅವನ ಸಂತತಿಗೆ ಭಾಗವಾಗದು, ಅವನ ಆಳಿಕೆಯಲ್ಲಿ ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು; ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ ನಾಲ್ಕು ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು. ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯ ಒಡೆದು ನಾಲ್ಕು ದಿಕ್ಕುಗಳಿಗೂ ಸೀಳಿಹೋಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ಪ್ರಬಲವಾಗಿ ಇದ್ದಂತೆ ಅದು ಇನ್ನು ಪ್ರಬಲವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ರಾಜನು ಬಂದ ಮೇಲೆ ಅವನ ರಾಜ್ಯವು ಒಡೆಯುವದು. ಅವನ ರಾಜ್ಯವು ನಾಲ್ಕು ಹೋಳಾಗಿ ಜಗತ್ತಿನ ನಾಲ್ಕು ದಿಕ್ಕುಗಳಲ್ಲಿ ಹಂಚಿಹೋಗುವುದು. ಅವನ ರಾಜ್ಯವು ಅವನ ಮಕ್ಕಳಲ್ಲಿ ಅಥವಾ ಮೊಮ್ಮಕ್ಕಳಲ್ಲಿ ಹಂಚಲ್ಪಡುವದಿಲ್ಲ. ಅವನ ರಾಜ್ಯಕ್ಕೆ ಅವನು ಮೊದಲು ಹೊಂದಿದ್ದ ಅಧಿಕಾರವು ಇರುವದಿಲ್ಲ. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಸಿದುಕೊಂಡು ಬೇರೆ ಜನರಿಗೆ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಉದಯಿಸಿದ ನಂತರ, ಅವನ ರಾಜ್ಯ ಒಡೆದು ಆಕಾಶದ ನಾಲ್ಕು ದಿಕ್ಕುಗಳಿಗೂ ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಅದು ಇನ್ನು ಪ್ರಬಲವಾಗದು. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಿತ್ತುಕೊಂಡು ಇತರರಿಗೆ ನೀಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:4
24 ತಿಳಿವುಗಳ ಹೋಲಿಕೆ  

ಆ ಕೊಂಬು ಮುರಿದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ ಆ ಜನಾಂಗದೊಳಗಿಂದ ನಾಲ್ಕು ರಾಜ್ಯಗಳು ಏಳುವವು; ಆದರೆ ಮೊದಲನೆಯ ರಾಜನಿಗೆ ಇದ್ದಷ್ಟು ಶಕ್ತಿಯು ಅವುಗಳಿಗೆ ಇರುವದಿಲ್ಲ.


ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು; ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.


ಆದರೆ ಯಾವ ಜನಾಂಗವು ಕೇಳುವದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶಮಾಡುವೆನು ಎಂಬದು ಯೆಹೋವನ ನುಡಿ.


ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಲ್ಲಿ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು; ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.


ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು - ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾ ಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.


ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ರಾಜ್ಯವನ್ನಾಗಲಿ ಕಿತ್ತು ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ


ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರಿಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವಾಸ್ತ್ಯಕ್ಕೂ ಅವನವನ ದೇಶಕ್ಕೂ ಪುನಃ ಬರಮಾಡುವೆನು.


ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ಆತನು ಅವರ ಆಲೋಚನೆಗಳನ್ನು ತಿಳುಕೊಂಡು ಅವರಿಗೆ ಹೇಳಿದ್ದೇನಂದರೆ - ಯಾವ ರಾಜ್ಯವಾದರೂ ತನ್ನಲ್ಲಿ ಭೇದಹುಟ್ಟಿದರೆ ಹಾಳಾಗುವದು; ತನ್ನಲ್ಲಿ ಭೇದ ಹುಟ್ಟಿದ ಯಾವ ಪಟ್ಟಣವಾದರೂ ಮನೆಯಾದರೂ ನಿಲ್ಲದು.


ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡೋಣವಾಯಿತು.


ಯೆಹೋವನ ಈ ವಾಕ್ಯವನ್ನು ಕೇಳು - ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.


ಆಗ ಬೂದಿ ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡದು, ಕೆಡವಲ್ಪಡದು.


ಎರಡನೆಯವನಿಲ್ಲದೆ ಒಬ್ಬೊಂಟಿಗನೊಬ್ಬನಿದ್ದಾನೆ; ಅವನಿಗೆ ಅಣ್ಣತಮ್ಮಂದಿರೂ ಇಲ್ಲ, ಮಕ್ಕಳೂ ಇಲ್ಲ; ಆದರೂ ಅವನ ಶ್ರಮೆಗೆ ಪಾರವಿಲ್ಲ, ಧನದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಲೇ ಇದ್ದೇನೆ ಅಂದುಕೊಳ್ಳುವನು. ಇದೂ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ನರರು ನಿಜವಲ್ಲದ ಮಾಯಾರೂಪದಿಂದ ಸಂಚರಿಸುವವರು; ಅವರು ಸುಮ್ಮ ಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವದೋ ತಾವೇ ತಿಳಿಯರು.


ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂವಿುಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂವಿುಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿಬೀಸದಂತೆ ಭೂವಿುಯ ಚತುರ್ದಿಕ್ಕುಗಳ ಗಾಳಿಗಳನ್ನು ಹಿಡಿದಿರುವದನ್ನು ಕಂಡೆನು.


ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರು ಸೇರದೆ ಇರುವ ರಾಜ್ಯವೇ ಇರದು.


ಆಗ ಅತನು ನನಗೆ - ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ನುಡಿ; ಶ್ವಾಸವೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ ಎಂಬದಾಗಿ ಶ್ವಾಸಕ್ಕೆ ನುಡಿ ಎಂದು ಅಪ್ಪಣೆಕೊಡಲು ನಾನು ಅಪ್ಪಣೆಯಂತೆ ನುಡಿದೆನು.


ಎಲೈ, ಎಲೈ, ಉತ್ತರದೇಶದಿಂದ ಓಡಿಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದರಿಸಿದ್ದೇನಲ್ಲಾ; ಇದು ಯೆಹೋವನ ನುಡಿ.


ಇವು ಆಕಾಶದ ನಾಲ್ಕು ಗಾಳಿಗಳು; ಭೂಲೋಕದೊಡೆಯನ ಸನ್ನಿಧಾನದಲ್ಲಿ ನಿಂತಿದ್ದು ಅಲ್ಲಿಂದ ಹೊರಟು ಬರುತ್ತಾ ಇವೆ ಎಂದುತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು