ದಾನಿಯೇಲ 11:40 - ಕನ್ನಡ ಸತ್ಯವೇದವು J.V. (BSI)40 ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳಲು ಅವನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿ ದಕ್ಷಿಣರಾಜನ ಮೇಲೆ ರಭಸವಾಗಿ ಬಿದ್ದು ನಾಡುನಾಡುಗಳಲ್ಲಿ ನುಗ್ಗಿ ತುಂಬಿತುಳುಕಿ ಹರಡಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 “ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 “ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 “ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು. ಅಧ್ಯಾಯವನ್ನು ನೋಡಿ |