Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:45 - ಕನ್ನಡ ಸತ್ಯವೇದವು J.V. (BSI)

45 ಸಮುದ್ರಕ್ಕೂ ಅಂದಚಂದದ ಪರಿಶುದ್ಧಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು; ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯಮಾಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಸಮುದ್ರಕ್ಕೂ ಸುಂದರವಾದ ಪರಿಶುದ್ಧ ಪರ್ವತಕ್ಕೂ ನಡುವೆ, ಅರಮನೆಯಂತಹ ತನ್ನ ಗುಡಾರಗಳನ್ನು ಹಾಕಿಸುವನು. ಕೊನೆಗೆ ಆ ಕೆಟ್ಟ ಅರಸನು ಸತ್ತುಹೋಗುವನು. ಅವನ ಅಂತ್ಯಕಾಲದ ಹೊತ್ತಿಗೆ ಅವನಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:45
29 ತಿಳಿವುಗಳ ಹೋಲಿಕೆ  

ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸಿ ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.


ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ದಂಡಿಗೂ ನಮ್ಮ ಪ್ರಿಯ ಪಟ್ಟಣಕ್ಕೂ ಮುತ್ತಿಗೆಹಾಕಿದರು. ಆಗ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಟ್ಟಿತು.


ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧನದಲ್ಲಿಟ್ಟನು.


ಅವನು ತೆಗೆದುಬಿಡಲ್ಪಟ್ಟ ಕೂಡಲೆ ಆ ಅಧರ್ಮಸ್ವರೂಪನು ಕಾಣಬರುವನು; ಅವನನ್ನು ಯೇಸು ಕರ್ತನು ತನ್ನ ಬಾಯ ಉಸುರಿನಿಂದ ಕೊಲ್ಲುವನು, ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ಸಂಹರಿಸುವನು.


ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇವಿುನೊಳಗಿಂದ ಹೊರಡುವದು; ಅರ್ಧಭಾಗವು ಪೂರ್ವಸಮುದ್ರಕ್ಕೂ ಅರ್ಧಭಾಗವು ಪಶ್ಚಿಮಸಮುದ್ರಕ್ಕೂ ಹರಿಯುವದು; ಬೇಸಿಗೆಕಾಲದಲ್ಲಿಯೂ ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವದು.


ಹೊರಟುಬಂದ ಬಹು ದೇಶಗಳವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ನಾನು ಬಡಗಣ ದಂಡನ್ನು ನಿಮ್ಮ ಕಡೆಯಿಂದ ದೂರ ತೊಲಗಿಸಿ ಹಾಳು ಬೆಗ್ಗಾಡಿಗೆ ಓಡಿಸಿ ಅದರ ಮುಂಭಾಗವನ್ನು ಮೂಡಣ ಸಮುದ್ರಕ್ಕೂ ಹಿಂಭಾಗವನ್ನು ಪಡುವಣ ಸಮುದ್ರಕ್ಕೂ ತಳ್ಳಿಬಿಡುವೆನು; ಆಹಾ, ಮಹತ್ಕಾರ್ಯಗಳನ್ನು ಮಾಡಿತು, ಅದರ [ಹೆಣಗಳ] ದುರ್ವಾಸನೆಯು ಏರುವದು, ಗಬ್ಬು ನಾರುವದು.


ಅಂದಚಂದದ ದೇಶಕ್ಕೂ ನುಗ್ಗುವನು; ಅನೇಕ ಸೀಮೆಗಳು ಅವನಿಂದ ಹಾಳಾಗುವವು; ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಇವರುಗಳು ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ದಕ್ಷಿಣರಾಜನಿಗೆ ವಿರುದ್ಧವಾಗಿ ಬರುವವನು ಇಚ್ಫಾನುಸಾರ ನಡೆಯುವನು; ಅವನಿಗೆ ಎದುರೇ ಇಲ್ಲ; ನಾಶನವನ್ನು ಕೈಯಲ್ಲಿಟ್ಟುಕೊಂಡು ಅಂದಚಂದದ ದೇಶದಲ್ಲಿ ನಿಂತಿರುವನು.


ಆಮೇಲೆ ನ್ಯಾಯಸಭೆಯು ಕೂತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿಬಿಡುವದು.


ಆಗ ಕಬ್ಬಿಣಮಣ್ಣು ತಾಮ್ರಬೆಳ್ಳಿಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ಆಹಾ, ನಾನು ನಿನಗೆ ವಿರುದ್ಧನಾಗಿ ನಿನ್ನನ್ನು ತಿರುಗಿಸಿ ಮುಂದರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ


ನೀನು ನಿನ್ನ ಮನಸ್ಸಿನಲ್ಲಿ - ನಾನು ಆಕಾಶಕ್ಕೆ ಹತ್ತಿ ಉತ್ತರದಿಕ್ಕಿನ ಕಟ್ಟಕಡೆಯಿರುವ ಸುರಗಣ ಪರ್ವತದಲ್ಲಿ ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಮೇಲೆ ಏರಿಸಿ ಆಸೀನನಾಗುವೆನು;


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ ರಮ್ಯವಾಗಿಯೂ ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವದು.


ನನ್ನ ಪರಿಶುದ್ಧಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವದಿಲ್ಲ, ಯಾರೂ ಹಾಳು ಮಾಡುವದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂವಿುಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವದು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.


ತೋಳವು ಕುರಿಯ ಸಂಗಡ ಮೇಯುವದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವದು. ಹಾವಿಗೆ ದೂಳೇ ಆಹಾರವಾಗುವದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡುಮಾಡುವದಿಲ್ಲ, ಯಾರೂ ಹಾಳುಮಾಡುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ಯರು ಯೆಹೋವನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಾಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧ ಪರ್ವತಕ್ಕೆ ಕರತರುವರು.


ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ನಿನ್ನ ಪವಿತ್ರಪರ್ವತವೂ ಆದ ಯೆರೂಸಲೇವಿುನ ಮೇಲಣ ನಿನ್ನ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿವಿುತ್ತ ಯೆರೂಸಲೇಮೂ ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.


ನಾನು ಬಾಯಿಬಿಟ್ಟು, ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿ ಪ್ರಾರ್ಥಿಸುತ್ತಿರುವಾಗಲೇ


ಹೀಗಿರಲು ಮೂಡಲಿಂದಲೂ ಬಡಗಲಿಂದಲೂ ಬರುವ ಸುದ್ದಿಯು ಅವನನ್ನು ಬಾಧಿಸುವದು; ಅವನು ಅತಿರೋಷಗೊಂಡು ಬಹು ಜನರನ್ನು ಧ್ವಂಸಿಸಿ ನಿರ್ನಾಮ ಮಾಡುವದಕ್ಕೆ ಹೊರಡುವನು.


ಅಲ್ಲಿಂದ ಅದು ಹಚರದ್ದಾರ್, ಅಚ್ಮೋನ್ ಎಂಬ ಊರುಗಳ ಮೇಲೆ ಐಗುಪ್ತದೇಶದ ಮುಂದಿರುವ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯಬೇಕು.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ ಅಶ್ಶೂರದ ರಾಜನ ಉಬ್ಬಟೆಯ ಕೊಚ್ಚಾಟಕ್ಕೂ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು