Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:7 - ಕನ್ನಡ ಸತ್ಯವೇದವು J.V. (BSI)

7 ಅನಂತರ ಅವಳು ಹುಟ್ಟಿದ ಬುಡದಿಂದ ಒಡೆದ ಸಸಿಯು ಅದರ ಸ್ಥಾನದಲ್ಲಿ ನಿಂತು ಉತ್ತರರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ ಅಲ್ಲಿನವರಿಗೆ ಮಾಡುವಷ್ಟು ಮಾಡಿ ಗೆದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅನಂತರ ಅವಳು ಹುಟ್ಟಿದ ವಂಶವೃಕ್ಷದಲ್ಲಿ ಹುಟ್ಟಿದವರು ಅದರ ಸ್ಥಾನದಲ್ಲಿ ನಿಂತು ಉತ್ತರ ದಿಕ್ಕಿನ ರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ, ಅವರೊಡನೆ ಯುದ್ಧಮಾಡಿ, ಅವರನ್ನು ಗೆಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಅವಳು ಹುಟ್ಟಿದ ಬುಡದಿಂದ ಒಡೆದ ಸಸಿಯೊಂದು ಅದರ ಸ್ಥಾನದಲ್ಲಿ ನಿಲ್ಲುವುದು. ಉತ್ತರರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು, ಅವನ ದುರ್ಗದೊಳಗೆ ನುಗ್ಗಿ, ಅಲ್ಲಿನವರಿಗೆ ಮಾಡುವಷ್ಟೂ ಮಾಡಿ ಗೆಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಆದರೆ ಅವಳ ಕುಟುಂಬದ ಒಬ್ಬ ವ್ಯಕ್ತಿಯು ದಕ್ಷಿಣದ ರಾಜನ ಸ್ಥಳವನ್ನು ತೆಗೆದುಕೊಳ್ಳಲು ಬರುವನು. ಅವನು ಉತ್ತರದ ರಾಜನ ಸೈನ್ಯದ ಮೇಲೆ ಧಾಳಿ ಮಾಡುವನು. ಅವನು ಆ ಅರಸನ ಭದ್ರವಾದ ಕೋಟೆಗೆ ನುಗ್ಗುವನು. ಅವನು ಯುದ್ಧಮಾಡಿ ಗೆಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವಳ ವಂಶದಲ್ಲಿಯ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು, ಸೈನ್ಯದೊಂದಿಗೆ ಬಂದು, ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ, ಅವರ ವಿರುದ್ಧ ಹೋರಾಡಿ ಗೆಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:7
14 ತಿಳಿವುಗಳ ಹೋಲಿಕೆ  

ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ; [ಕೈಯ ಮೇಲೆ] ಕೈ ಇಟ್ಟರೇನು? ಇದನ್ನೆಲ್ಲಾ ಮಾಡಿಬಿಟ್ಟನಲ್ಲವೇ? ಇವನು ಪಾರಾಗನು.


ನೀನು ಅವರನ್ನು ನಾಟಿದ್ದೀ, ಅವರು ಬೇರೂರಿ ಬೆಳೆದು ಹಣ್ಣುಬಿಟ್ಟಿದ್ದಾರೆ; ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವದು, ಅದರ ಬೇರಿನಿಂದ ಹೊರಟ ತಳಿರು ಫಲಿಸುವದು;


ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ತಾಲತೃಣಗಳನ್ನೂ ಒಂದೇ ದಿನದಲ್ಲಿ ಕಡಿದುಬಿಟ್ಟಿದ್ದಾನೆ.


ಅವನ ಜೀವಿತದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕರು. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.


ಕಡಿದ ಮರವೂ ತಾನು ಮೊಳೆಯುವದನ್ನು ನಿಲ್ಲಿಸದೆ ಮತ್ತೆ ಚಿಗುರೇನೆಂದು ನಿರೀಕ್ಷಿಸುತ್ತದಲ್ಲವೇ!


ಕೆಲವು ವರುಷಗಳ ಮೇಲೆ ಅವರು ಸೇರಿಕೊಳ್ಳುವರು; ದಕ್ಷಿಣರಾಜನ ಕುಮಾರಿಯು ಉತ್ತರದಿಕ್ಕಿನ ರಾಜನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು; ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಳು; ಅವನೂ ಅವನ ತೋಳೂ ನಿಲ್ಲವು; ಅವಳೂ ಅವಳನ್ನು ಕರತಂದವರೂ ಪಡೆದವನೂ ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು.


ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳಲು ಅವನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿ ದಕ್ಷಿಣರಾಜನ ಮೇಲೆ ರಭಸವಾಗಿ ಬಿದ್ದು ನಾಡುನಾಡುಗಳಲ್ಲಿ ನುಗ್ಗಿ ತುಂಬಿತುಳುಕಿ ಹರಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು