Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:8 - ಕನ್ನಡ ಸತ್ಯವೇದವು J.V. (BSI)

8 ಅವನ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಐಗುಪ್ತಕ್ಕೆ ಬಂದು ಕೆಲವು ವರುಷಗಳ ತನಕ ಉತ್ತರರಾಜನ ತಂಟೆಗೆ ಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಈಜಿಪ್ಟಿಗೆ ಹಿಂದಿರುಗುವನು. ಕೆಲವು ವರ್ಷಗಳ ತನಕ ಉತ್ತರರಾಜನ ಗೊಡವೆಗೆ ಹೋಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ಅವರ ವಿಗ್ರಹಗಳನ್ನು ತೆಗೆದುಕೊಳ್ಳುವನು. ಅವನು ಅವರ ಲೋಹದ ಪ್ರತಿಮೆಗಳನ್ನು ಮತ್ತು ಅವುಗಳ ಬೆಲೆಬಾಳುವ ಬೆಳ್ಳಿ ಮತ್ತು ಬಂಗಾರದ ವಸ್ತುಗಳನ್ನು ತೆಗೆದುಕೊಳ್ಳುವನು. ಆ ವಸ್ತುಗಳನ್ನೆಲ್ಲಾ ಈಜಿಪ್ಟಿಗೆ ತೆಗೆದುಕೊಂಡು ಹೋಗುವನು. ಆಮೇಲೆ ಕೆಲವು ವರ್ಷಗಳವರೆಗೆ ಅವನು ಉತ್ತರದ ರಾಜನಿಗೆ ಕಿರುಕುಳ ಕೊಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ದೇವರುಗಳನ್ನೂ, ಅವರ ವಿಗ್ರಹಗಳನ್ನೂ ಅವರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನೂ ಅವನು ಸೂರೆಮಾಡಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋಗುವನು. ಕೆಲವು ವರ್ಷಗಳವರೆಗೆ ಅವನು ಉತ್ತರದ ಅರಸನ ಮೇಲೆ ಬಿಟ್ಟುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:8
17 ತಿಳಿವುಗಳ ಹೋಲಿಕೆ  

ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ, ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವು ಅವರಿಂದ ಹಾಳಾದವು.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವದು, ಅದರ ಒರತೆಯು ಒಣಗುವದು; [ಶತ್ರುವು] ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಗೊಂಬುವನು.


ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.


ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ, ಮಾಂಸವನ್ನೂ ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ, ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನೋ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸಿ


ಎಲ್ಲಾ ದೊಡ್ಡ ದೊಡ್ಡ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿಗೂ ಆ ದಿನವು ತಪ್ಪದೆ ಬರುವದು.


ಅವನು - ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವದು ಹೇಗೆ ಅಂದನು.


ಅವರ ಬಲಿಪೀಠಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು ಅವರ ದೇವತಾಪ್ರತಿಮೆಗಳನ್ನು ಕಡಿದು ಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು.


ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ ಐಗುಪ್ತ್ಯರ ಚೊಚ್ಚಲುಮಕ್ಕಳನ್ನು ಸಂಹರಿಸಿದದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು.


ಆ ರಾತ್ರಿ ನಾನು ಐಗುಪ್ತ ದೇಶದ ನಡುವೆ ಹಾದುಹೋಗಿ ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಚೊಚ್ಚಲಾಗಿರುವದನ್ನೆಲ್ಲಾ ಸಂಹರಿಸುವೆನು; ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ಶಿಕ್ಷೆಮಾಡುವೆನು; ನಾನು ಯೆಹೋವನು.


ಆದರೆ ತಂದೆಯ ಮನೆಗೆ ಹೋಗುವದಕ್ಕೆ ನಿನಗೆ ಬಹಳ ಆಶೆಯಿರುವದರಿಂದ ಹೋಗಬೇಕಾಯಿತು. ಅದಿರಲಿ; ನನ್ನ ದೇವರುಗಳನ್ನು ಕದ್ದದ್ದು ಯಾಕೆ ಎಂದು ಹೇಳಿದನು.


ಬಳಿಕ ಉತ್ತರರಾಜನು ದಕ್ಷಿಣರಾಜನ ರಾಜ್ಯದೊಳಗೆ ನುಗ್ಗಿ ಸ್ವದೇಶಕ್ಕೆ ಹಿಂದಿರುಗುವನು.


ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು