Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:3 - ಕನ್ನಡ ಸತ್ಯವೇದವು J.V. (BSI)

3 ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು; ಬಹು ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ನೀತಿವಂತರಾಗಿ ಜೀವಿಸಲು ಅವರು ಅನೇಕರಿಗೆ ಉಪದೇಶಿಸುವರು. ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:3
27 ತಿಳಿವುಗಳ ಹೋಲಿಕೆ  

ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಲಿ ಅಂದನು.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ ಅವರು ಬಹು ದಿವಸ ಕತ್ತಿ ಬೆಂಕಿ ಸೆರೆಸೂರೆಗಳಿಗೆ ಸಿಕ್ಕಿಬೀಳುತ್ತಿರುವರು.


ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು; ಅದರಿಂದ ಜನರು ಶೋಧಿಸಲ್ಪಟ್ಟು ಶುದ್ಧಹೊಂದಿ ಶುಭ್ರರಾಗುವರು; ಅಂತ್ಯವು ಕ್ಲುಪ್ತಕಾಲದಲ್ಲೇ ಆಗುವದು.


ಧರ್ಮಾತ್ಮನ ಫಲ ಜೀವವೃಕ್ಷ; ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ಕಾಲವನ್ನು ನೋಡಿದರೆ ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.


ಯೋಹಾನನು ಉರಿಯುವ ದೀಪದೋಪಾದಿಯಲ್ಲಿ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪಕಾಲ ವಿನೋದಗೊಳ್ಳುವದಕ್ಕೆ ಮನಸ್ಸುಮಾಡಿದಿರಿ.


ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ; ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ; ಹೀಗೆ ಬಿತ್ತುವವನಿಗೂ ಕೊಯ್ಯುವವನಿಗೂ ಕೂಡ ಸಂತೋಷವಾಗುವದು.


ದೇವರು ನನಗೆ ಕೃಪೆಯಿಂದ ಒಪ್ಪಿಸಿದ ಕೆಲಸವನ್ನು ನಡಿಸಿ ನಾನು ಪ್ರವೀಣಶಿಲ್ಪಿಯಂತೆ ಅಸ್ತಿವಾರ ಹಾಕಿದೆನು, ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಪ್ರತಿಯೊಬ್ಬನು ತಾನು ಅದರ ಮೇಲೆ ಎಂಥದನ್ನು ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.


ಇವರು ನನ್ನ ಆಲೋಚನಾಸಭೆಯಲ್ಲಿ ನಿಂತಿದ್ದರೆ ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ ಅವರನ್ನು ಅವರ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ - ಆ ಏಳು ನಕ್ಷತ್ರಗಳು ಅಂದರೆ ಆ ಏಳು ಸಭೆಗಳ ದೂತರು; ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.


ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ಇದೇ ಅಭಿಪ್ರಾಯಕ್ಕೆ ಸರಿಯಾಗಿ ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸೌವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡಲಿಕ್ಕೆ ಅವರ ಮೇಲಿಟ್ಟ ನಂಬಿಗಸ್ತನೂ ವಿವೇಕಿಯೂ ಆದಂಥ ಆಳು ಯಾರು?


ಯೇಸು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿರುವ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರಂದರೆ - ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಉಪರಾಜನಾದ ಹೆರೋದನ ಸಾಕತಮ್ಮನಾದ ಮೆನಹೇನ, ಸೌಲ ಇವರೇ.


ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು; ಜ್ಞಾನಹೀನರಿಗಾಗುವ ಬಹುಮಾನವೋ ಅವಮಾನವೇ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಅನೇಕರು ತಮ್ಮನ್ನು ಶುದ್ಧೀಕರಿಸಿ ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವದು.


ಮೋಶೆಯ ಮುಖವು ಪ್ರಕಾಶಮಾನವಾಗಿರುವದನ್ನು ಇಸ್ರಾಯೇಲ್ಯರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತಾಡುವದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ತಿರಿಗಿ ಹಾಕಿಕೊಂಡಿರುವನು.


ಯೆಹೋವನ ಎಲ್ಲಾ ಶತ್ರುಗಳೂ ಇವರಂತೆಯೇ ನಾಶವಾಗಲಿ; ಆತನ ಭಕ್ತರು ಪ್ರತಾಪದಿಂದ ಉದಯಿಸುವ ಸೂರ್ಯನಂತಿರಲಿ. ದೇಶದಲ್ಲಿ ನಾಲ್ವತ್ತು ವರುಷ ಸಮಾಧಾನವಿತ್ತು.


ಮತ್ತು ಪ್ರಸಂಗಿಯು ಜ್ಞಾನಿಯಾಗಿದ್ದದ್ದಲ್ಲದೆ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ ಪರೀಕ್ಷಿಸಿ ಕ್ರಮಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು