Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:4 - ಕನ್ನಡ ಸತ್ಯವೇದವು J.V. (BSI)

4 ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು, ಅಂತ್ಯಕಾಲದವರೆಗೆ ಮರೆಯಾಗಿರಲಿ; ಬಹು ಜನರು ಅತ್ತಿತ್ತ ತಿರುಗುವರು, ತಿಳುವಳಿಕೆಯು ಹೆಚ್ಚುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ದಾನಿಯೇಲನೇ, ನೀನು ಈ ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತ್ತಿತ್ತ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:4
25 ತಿಳಿವುಗಳ ಹೋಲಿಕೆ  

ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.


ಇದಲ್ಲದೆ ಅವನು ನನಗೆ - ಈ ಪುಸ್ತಕದಲ್ಲಿರುವ ಪ್ರವಾದನವಾಕ್ಯಗಳನ್ನು ಗುಪ್ತವಾಗಿಡಬೇಡ; ಇವು ನೆರವೇರುವ ಸಮಯವು ಸಮೀಪವಾಗಿದೆ.


ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ; ಆದರೆ ಆ ಕನಸು ಗುಟ್ಟಾಗಿರಲಿ; ಅದು ಬಹು ದೂರದ ಕಾಲದ್ದು ಎಂದು ಹೇಳಿದನು.


ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬರಲು ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು; ನನಗೆ ಅವನು - ನರಪುತ್ರನೇ, ಇದು ಮಂದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂದು ಹೇಳಿದನು.


ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ - ಆ ಏಳು ಗುಡುಗುಗಳು ನುಡಿದದ್ದನ್ನು ನೀನು ಬರೆಯದೆ ಗುಪ್ತವಾಗಿಡು ಎಂದು ಹೇಳುವ ಆಕಾಶವಾಣಿಯನ್ನು ಕೇಳಿದೆನು.


ನೀನು ಹೋಗಿ ಅಂತ್ಯದವರೆಗೆ ಇರು; ನೀನು ದೀರ್ಘ ನಿದ್ರೆಯನ್ನು ಹೊಂದಿ ಯುಗಸಮಾಪ್ತಿಯಲ್ಲಿ ಎದ್ದು ನಿನಗಾಗುವ ಸ್ವಾಸ್ತ್ಯದೊಳಗೆ ನಿಲ್ಲುವಿ ಎಂದು ಹೇಳಿದನು.


ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.


ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.


ಇದಲ್ಲದೆ ಪರಲೋಕರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲಾಗುವದು; ಆಗ ಅಂತ್ಯವು ಬರುವದು.


ನನ್ನ ಪರಿಶುದ್ಧಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವದಿಲ್ಲ, ಯಾರೂ ಹಾಳು ಮಾಡುವದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂವಿುಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವದು.


ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳಲು ಅವನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿ ದಕ್ಷಿಣರಾಜನ ಮೇಲೆ ರಭಸವಾಗಿ ಬಿದ್ದು ನಾಡುನಾಡುಗಳಲ್ಲಿ ನುಗ್ಗಿ ತುಂಬಿತುಳುಕಿ ಹರಡಿಕೊಳ್ಳುವನು.


ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ ಅವರು ಬಹು ದಿವಸ ಕತ್ತಿ ಬೆಂಕಿ ಸೆರೆಸೂರೆಗಳಿಗೆ ಸಿಕ್ಕಿಬೀಳುತ್ತಿರುವರು.


ಆದರೂ ಅವರ ಕಿವಿಗೆ ಬೀಳಲಿಲ್ಲವೇನು ಎಂದು ಕೇಳುತ್ತೇನೆ. ಬಿದ್ದದ್ದು ನಿಶ್ಚಯ. ಸಾರುವವರ ಧ್ವನಿಯು ಭೂವಿುಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.


ಪಾರಸಿಯ ರಾಜನಾದ ಕೋರೆಷನ ಆಳಿಕೆಯ ಮೂರನೆಯ ವರುಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಬಹು ಕಷ್ಟದ ಗಡುವಿನ ಆ ಸಂಗತಿಯು ಸತ್ಯ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮಂದಟ್ಟುಮಾಡಿಕೊಂಡನು.


ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು.


ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು; ಅದರ ಎರಡು ಪಕ್ಕೆಗಳಲ್ಲಿಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರಬಲ್ಲವನಿಗೆ - ದಯಮಾಡಿ ಓದೆಂದು ಒಪ್ಪಿಸಿದರೆ ಅವನು - ಮುದ್ರೆಹಾಕಿದೆಯಲ್ಲಾ, ಆಗುವದಿಲ್ಲ ಅನ್ನುವನು;


ಯೆರೂಸಲೇವಿುನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನನುಸರಿಸುವ ಒಬ್ಬನಾದರೂ ಇದ್ದಾನೋ, ಇಂಥ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷವಿುಸುವೆನು.


ಉಳಿದುಕೊಂಡು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು ಎಂದು ಹೇಳಿದನು.


(ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು.) ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನು ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ.


ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು; ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.


ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲದ್ದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು