Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:12 - ಕನ್ನಡ ಸತ್ಯವೇದವು J.V. (BSI)

12 ಇದನ್ನು ಕೇಳಿ ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದನ್ನು ಕೇಳಿ, ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದನ್ನು ಕೇಳಿ ರಾಜನು ಉಗ್ರಕೋಪಗೊಂಡನು. ಬಾಬಿಲೋನಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದನ್ನು ಕೇಳಿ ಅರಸನು ಬಹಳ ಕೋಪಗೊಂಡು ಬಾಬಿಲೋನಿನ ಎಲ್ಲಾ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದನ್ನು ಕೇಳಿ ಅರಸನು ಕೋಪ ಮತ್ತು ರೌದ್ರವುಳ್ಳವನಾಗಿ, ಬಾಬಿಲೋನಿನಲ್ಲಿರುವ ಎಲ್ಲಾ ಜ್ಞಾನಿಗಳನ್ನು ಕೊಲೆಮಾಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:12
14 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಹಿಡತರಬೇಕೆಂದು ಆಜ್ಞಾಪಿಸಿದನು.


ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ಕಡೆಗೆ ಬೇರೆಮಾಡಿಕೊಂಡು ಆವಿಗೆಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ - ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ ಅದರ ಅಭಿಪ್ರಾಯವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ಚೂರುಚೂರಾಗಿ ಕಡಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಸಿಬಿಡುವೆನು;


ಕೋಪಿಷ್ಠನು ಜಗಳವನ್ನೆಬ್ಬಿಸುವನು; ಕ್ರೋಧಶೀಲನು ದೋಷಭರಿತನು.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.


ರಾಜನ ರೋಷವು ಸಿಂಹದ ಗರ್ಜನೆ; ಅವನ ದಯೆಯು ಪೈರಿನ ಇಬ್ಬನಿ.


ಭೂಪನ ಕೋಪ ಮೃತ್ಯುವಿನ ದೂತ; ಜಾಣನು ಅದನ್ನು ಶಮನಪಡಿಸುವನು.


ಕರಕರೆಯಿಂದ ಮೂರ್ಖನಿಗೆ ನಾಶನವು. ರೋಷದಿಂದ ಮೂಢನಿಗೆ ಮರಣವು ಸಂಭವಿಸುವದಲ್ಲವೇ.


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಆಗ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವದಕ್ಕೆ ರಾಜನು ನೇವಿುಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ - ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು ಎಂದು ಹೇಳಿದನು.


ಈ ಮಹತ್ವ ವರದ ನಿವಿುತ್ತ ಸಕಲ ಜನಾಂಗಕುಲಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ಬೇಕುಬೇಕಾದವರನ್ನು ಕೊಲ್ಲಿಸಿದನು, ಬೇಕುಬೇಕಾದವರನ್ನು ಉಳಿಸಿದನು, ಮನಸ್ಸುಬಂದವರನ್ನು ಏರಿಸಿದನು, ಮನಸ್ಸುಬಂದವರನ್ನು ಇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು