Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:20 - ಕನ್ನಡ ಸತ್ಯವೇದವು J.V. (BSI)

20 ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಕೊಂಡಾಟವಾಗಲಿ! ಜ್ಞಾನತ್ರಾಣಗಳು ಆತನವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ! ಜ್ಞಾನ ತ್ರಾಣಗಳು ಆತನವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರ! ಏಕೆಂದರೆ ಜ್ಞಾನವೂ ಶಕ್ತಿಯೂ ಆತನಿಗೆ ಸ್ವಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ದೇವರ ನಾಮವನ್ನು ಎಂದೆಂದಿಗೂ ಸ್ತುತಿಸಿರಿ! ಜ್ಞಾನವೂ ಸಾಮರ್ಥ್ಯವೂ ಆತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗೆಂದು ಹೇಳಿದನು: “ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರವಾಗಲಿ! ಏಕೆಂದರೆ ಜ್ಞಾನವೂ, ಬಲವೂ ಅವರದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:20
25 ತಿಳಿವುಗಳ ಹೋಲಿಕೆ  

ಇಂದಿನಿಂದ ಯುಗಯುಗಕ್ಕೂ ಯೆಹೋವನಾಮವು ಕೀರ್ತಿಸಲ್ಪಡಲಿ.


ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಆಲೋಚನೆಯೂ ವಿವೇಕವೂ ಆತನವೇ.


ಅವರ ಸ್ವರವು ನನಗೆ ಕೇಳಿಸಿತು; ಅವರು ಮಹಾ ಶಬ್ದದಿಂದ - ವಧಿತನಾದ ಕುರಿಯಾದಾತನು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನ ಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಹೇಳಿದರು.


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ;


ನಮ್ಮ ಕರ್ತನು ದೊಡ್ಡವನೂ ಪರಾಕ್ರವಿುಯೂ ಆಗಿದ್ದಾನೆ; ಆತನ ಜ್ಞಾನವು ಅಪರಿವಿುತವಾಗಿದೆ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ಸದ್ಯೋಚನೆಯೂ ಸುಜ್ಞಾನವೂ ಸಾಮರ್ಥ್ಯವೂ ನನ್ನಲ್ಲಿವೆ; ವಿವೇಕವು ನಾನೇ.


ನಾವೋ ಇಂದಿನಿಂದ ಸದಾಕಾಲವೂ ಯಾಹುವನ್ನು ಕೊಂಡಾಡುವೆವು. ಯಾಹುವಿಗೆ ಸ್ತೋತ್ರ!


ತಾನು ವಾಗ್ದಾನಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿಶ್ರೇಷ್ಠವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.


ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.


ಆಮೇಲೆ ಅವನು ಜನರ ಸಮ್ಮತಿಯಿಂದ ಯೆಹೋವನಿಗೋಸ್ಕರ ಗಾಯನಮಾಡುವದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ - ಪರಿಶುದ್ಧತ್ವವೆಂಬ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂದು ಭಜಿಸಿರಿ ಎಂಬದಾಗಿ ಆಜ್ಞಾಪಿಸಿದನು.


ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ - ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ಆತನನ್ನೂ ಅರಸನನ್ನೂ ನಮಸ್ಕರಿಸಿದರು.


ಪರಾತ್ಪರನಾದ ದೇವರು ನಿನ್ನ ಶತೃಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನು.


ಯಾಹುವಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನಾಮಸ್ತುತಿಮಾಡಿರಿ.


ಇಗೋ, ನೀನು ದಾನಿಯೇಲನಿಗಿಂತಲೂ ಬುದ್ಧಿವಂತನು; ನಿನಗೆ ಮರೆಯಾದ ಮರ್ಮವು ಯಾವದೂ ಇಲ್ಲ;


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು - ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವಾಗಲಿ ಅನ್ನಿರಿ ಎಂದು ಹೇಳಿ - ಯೆಹೋವನೇ, ಸರ್ವಸ್ತುತಿಕೀರ್ತನೆಗಳಿಗೆ ವಿುಗಿಲಾಗಿರುವ ನಿನ್ನ ಮಹಾನಾಮಕ್ಕೆ ಕೊಂಡಾಟವಾಗಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು