ದಾನಿಯೇಲ 2:22 - ಕನ್ನಡ ಸತ್ಯವೇದವು J.V. (BSI)22 ಆತನು ಅಗಾಧವಿಷಯಗಳನ್ನೂ ಗೂಡಾರ್ಥಗಳನ್ನೂ ಬೈಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವದೂ ಆತನಿಗೆ ಗೋಚರ; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಳದಲ್ಲಿ ಅಡಗಿರುವ ರಹಸ್ಯಗಳನ್ನು ಬಲ್ಲವನು ಆತನೇ. ಬೆಳಕು ಆತನಲ್ಲಿಯೇ ಇದೆ. ಆದ್ದರಿಂದ ಕಗ್ಗತ್ತಲೆಯಲ್ಲಿ ಅಡಗಿರುವುದು ಆತನಿಗೆ ಗೋಚರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ. ಅಧ್ಯಾಯವನ್ನು ನೋಡಿ |
ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.