ದಾನಿಯೇಲ 2:24 - ಕನ್ನಡ ಸತ್ಯವೇದವು J.V. (BSI)24 ಆಗ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವದಕ್ಕೆ ರಾಜನು ನೇವಿುಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ - ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಂತರ ದಾನಿಯೇಲನು ಬಾಬೆಲಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ ಅರ್ಯೋಕನ ಬಳಿಗೆ ಹೋಗಿ ಅವನಿಗೆ, “ಬಾಬೆಲಿನ ವಿದ್ವಾಂಸರನ್ನು ಕೊಲ್ಲಬೇಡ; ನನ್ನನ್ನು ರಾಜನ ಸನ್ನಿಧಿಗೆ ಬಿಡು; ನಾನು ಕನಸಿನ ಅಭಿಪ್ರಾಯವನ್ನು ರಾಜನಿಗೆ ತಿಳಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ತರುವಾಯ ದಾನಿಯೇಲನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ್ದ ಅರ್ಯೋಕನ ಬಳಿಗೆ ಹೋದನು. ಅವನಿಗೆ, “ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಬೇಡ. ನನ್ನನ್ನು ರಾಜನ ಸನ್ನಿಧಿಗೆ ಸೇರಿಸಿಬಿಡು, ನಾನು ಆ ಕನಸಿನ ಉದ್ದೇಶವನ್ನು ರಾಜನಿಗೆ ತಿಳಿಸುವೆನು,” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಮೇಲೆ ದಾನಿಯೇಲನು ಅರ್ಯೋಕನ ಬಳಿಗೆ ಹೋದನು. ಅರಸನಾದ ನೆಬೂಕದ್ನೆಚ್ಚರನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲುವದಕ್ಕೆ ಅರ್ಯೋಕನನ್ನು ಆರಿಸಿದ್ದನು. ದಾನಿಯೇಲನು ಅರ್ಯೋಕನಿಗೆ, “ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಬೇಡ. ನನ್ನನ್ನು ಅರಸನ ಹತ್ತಿರ ಕರೆದುಕೊಂಡು ಹೋಗು. ನಾನು ಅವನಿಗೆ ಅವನ ಕನಸನ್ನು ಮತ್ತು ಅದರ ಅರ್ಥವನ್ನು ತಿಳಿಸುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದಾನಿಯೇಲನು ಬಾಬಿಲೋನಿನ ಜ್ಞಾನಿಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ, “ನೀನು ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಬೇಡ. ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು. ಆಗ ನಾನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |