ದಾನಿಯೇಲ 2:28 - ಕನ್ನಡ ಸತ್ಯವೇದವು J.V. (BSI)28 ಆದರೆ ರಹಸ್ಯಗಳನ್ನು ವ್ಯಕ್ತಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಪರಲೋಕದಲ್ಲಿದ್ದಾನೆ; ಉತ್ತರಕಾಲದಲ್ಲಿ ನಡೆಯತಕ್ಕದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆದರೆ ರಹಸ್ಯಗಳನ್ನು ವ್ಯಕ್ತಪಡಿಸಬಲ್ಲವರು ಒಬ್ಬರಿದ್ದಾರೆ. ಅವರೇ ಪರಲೋಕದಲ್ಲಿರುವ ದೇವರು. ಬರಲಿರುವ ಕಾಲದಲ್ಲಿ ನಡೆಯತಕ್ಕದ್ದನ್ನು ರಾಜ ನೆಬೂಕದ್ನೆಚ್ಚರರಾದ ನಿಮಗೆ ಅವರೇ ತಿಳಿಯಪಡಿಸಿದ್ದಾರೆ. ನೀವು ಕಂಡ ಕನಸು, ಹಾಸಿಗೆಯ ಮೇಲೆ ಮಲಗಿದ್ದಾಗ ನಿಮ್ಮ ಮನಸ್ಸಿಗೆ ತೋಚಿದ ಸ್ವಪ್ನಗಳು ಹೀಗಿವೆ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ಪರಲೋಕದಲ್ಲಿ ಯೆಹೋವನು ಎಂಬಾತನಿದ್ದಾನೆ. ಆತನು ರಹಸ್ಯಗಳನ್ನು ಹೇಳುತ್ತಾನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ಅರಸನಾದ ನಿನಗೆ ಯೆಹೋವನು ತಿಳಿಯಪಡಿಸಿದ್ದಾನೆ. ಇದೇ ನೀನು ಕಂಡ ಕನಸು, ನೀನು ಹಾಸಿಗೆಯ ಮೇಲೆ ಮಲಗಿದ್ದಾಗ ಕಂಡ ಸಂಗತಿಗಳು ಇವು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ. ಅಧ್ಯಾಯವನ್ನು ನೋಡಿ |