ದಾನಿಯೇಲ 2:34 - ಕನ್ನಡ ಸತ್ಯವೇದವು J.V. (BSI)34 ನೀನು ನೋಡುತ್ತಿರಲಾಗಿ [ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು [ಸಿಡಿದು ಬಂದು] ಆ ಪ್ರತಿಮೆಯ ಕಬ್ಬಿಣಮಣ್ಣಿನ ಹೆಜ್ಜೆಗಳಿಗೆ ಬಡಿದು ಚೂರುಚೂರು ಮಾಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನೀವು ನೋಡುತ್ತಿದ್ದ ಹಾಗೆ ಬೆಟ್ಟದಿಂದ ಒಂದು ಗುಂಡು ಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನಿಂದಾದ ಆ ಪಾದಗಳಿಗೆ ಬಡಿದು ಚೂರುಚೂರು ಮಾಡಿಬಿಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನೀನು ಆ ಪ್ರತಿಮೆಯನ್ನು ನೋಡುತ್ತಿದ್ದಾಗ ನಿನಗೊಂದು ಬಂಡೆಯು ಕಾಣಿಸಿತು. ಆ ಬಂಡೆಯು ತನ್ನಷ್ಟಕ್ಕೆ ತಾನೇ ಸಡಿಲಗೊಂಡಿತು; ಯಾರೂ ಅದನ್ನು ಒಡೆಯಲಿಲ್ಲ. ಆಮೇಲೆ ಆ ಬಂಡೆಯು ಗಾಳಿಯಲ್ಲಿ ಹಾರಿಬಂದು ಆ ಪ್ರತಿಮೆಯ ಕಬ್ಬಿಣ ಮತ್ತು ಮಣ್ಣಿನ ಪಾದಗಳಿಗೆ ಅಪ್ಪಳಿಸಿತು. ಆ ಬಂಡೆಯು ಪ್ರತಿಮೆಯ ಪಾದಗಳನ್ನು ಒಡೆದು ಪುಡಿಪುಡಿ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನೀವು ನೋಡುತ್ತಿರಲಾಗಿ, ಒಂದು ಗುಂಡು ಬಂಡೆಯು ಮಾನವ ಹಸ್ತದ ಸಹಾಯವಿಲ್ಲದೆ ಒಡೆದು, ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದಗಳಿಗೆ ಬಡಿದು ಚೂರುಚೂರು ಮಾಡಿತು. ಅಧ್ಯಾಯವನ್ನು ನೋಡಿ |