Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:35 - ಕನ್ನಡ ಸತ್ಯವೇದವು J.V. (BSI)

35 ಆಗ ಕಬ್ಬಿಣಮಣ್ಣು ತಾಮ್ರಬೆಳ್ಳಿಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆಗ ಕಬ್ಬಿಣ-ಮಣ್ಣು-ಕಂಚು-ಬೆಳ್ಳಿ-ಬಂಗಾರ ಇವುಗಳೆಲ್ಲವೂ ಪುಡಿಪುಡಿಯಾದವು; ಸುಗ್ಗಿಯ ಕಣಗಳ ಹೊಟ್ಟಿನಂತಾದವು. ಗಾಳಿ ಅವುಗಳನ್ನು ತೂರಿಕೊಂಡುಹೋಯಿತು. ಅವುಗಳಿಗೆ ನೆಲೆಯೇ ಇಲ್ಲವಾಯಿತು. ಪ್ರತಿಮೆಗೆ ಬಡಿದ ಆ ಬಂಡೆ ಮಹಾ ಪರ್ವತವಾಗಿ ಭೂಲೋಕದಲ್ಲೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:35
28 ತಿಳಿವುಗಳ ಹೋಲಿಕೆ  

ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವದೇ ಇಲ್ಲ.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ಹೀಗಿರಲು ಅವರು ಪ್ರಾತಃಕಾಲದ ಮೋಡದ ಪ್ರಕಾರವಾಗಿಯೂ ಬೇಗನೆ ಮಾಯವಾಗುವ ಇಬ್ಬನಿಯಂತೆಯೂ ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ ಗವಾಕ್ಷದಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.


ನನ್ನ ಪರಿಶುದ್ಧಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವದಿಲ್ಲ, ಯಾರೂ ಹಾಳು ಮಾಡುವದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂವಿುಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವದು.


ಮತ್ತು ಪರಲೋಕದೊಳಗೆ ಅವರಿಗೆ ಸ್ಥಾನವು ತಪ್ಪಿಹೋಯಿತು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಯಾಕಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವದು ಅವಶ್ಯ.


ಚೀಯೋನ್ ನಗರಿಯೇ, ಎದ್ದು ಒಕ್ಕು; ನಾನು ನಿನ್ನ ಕೊಂಬನ್ನು ಕಬ್ಬಿಣವನ್ನಾಗಿಯೂ ನಿನ್ನ ಗೊರಸನ್ನು ತಾಮ್ರವನ್ನಾಗಿಯೂ ಮಾಡುವೆನು; ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ; ಅವುಗಳಿಂದ ಹೊಡೆದ ಕೊಳ್ಳೆಯನ್ನು ಕೇವಲ ಯೆಹೋವನದಾಗಿ ಪ್ರತ್ಯೇಕಿಸುವಿ, ಅವುಗಳ ಆಸ್ತಿಯನ್ನು ಲೋಕದ ಕರ್ತನಿಗೆ ಮೀಸಲುಮಾಡುವಿ.


ಗಾಳಿಬಡಿಯುತ್ತಲೇ ಅದು ಹೋಗುವದು; ಅದರ ಸ್ಥಳವು ಅದನ್ನು ತಿರುಗಿ ಕಾಣುವದಿಲ್ಲ.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ಸರ್ವಭೂನಿವಾಸಿಗಳು ನಿನಗೆ ಎರಗಿ ಭಜಿಸುತ್ತಾ ನಿನ್ನ ನಾಮವನ್ನು ಕೀರ್ತಿಸುವರು ಎಂದು ಬಿನ್ನೈಸಿರಿ. ಸೆಲಾ.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ನಿಲ್ಲಿಸಿಬಿಟ್ಟಿದ್ದಾನೆ; ಬಿಲ್ಲುಗಳನ್ನೂ ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ ಅವನು ಇಲ್ಲದೆ ಹೋಗಿದ್ದನು; ಅವನನ್ನು ಹುಡುಕಿದರೂ ಸಿಕ್ಕಲೇ ಇಲ್ಲ.


ಭೂಮಂಡಲದವರೆಲ್ಲರು ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [ಯೆಹೋವನೇ,] ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಬೇಸಿಗೆ ಬರುತ್ತಲೇ ಮಾಯವಾಗುವವು, ಸೆಕೆಯುಂಟಾದಾಗಲೋ ಅವು ಬತ್ತಿ ಕಾಣಿಸದೆ ಹೋಗುವವು.


ಜನಾಂಗಗಳೇ, ಭಂಗಪಡಿಸಿರಿ, ನೀವೂ ಭಂಗಪಡುವಿರಿ; ದೂರದೇಶೀಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತಜನಗಳಿಗೂ ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನೆತ್ತುವವರೆಲ್ಲರಿಗೂ ಕಡುಗಾಯವಾಗುವದು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿಹಾಕಲು ಕೂಡಿಬರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು