ದಾನಿಯೇಲ 2:38 - ಕನ್ನಡ ಸತ್ಯವೇದವು J.V. (BSI)38 ನರಜಾತಿಯವರು ವಾಸಿಸುವ ಸಕಲ ಪ್ರಾಂತಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ನರಮಾನವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿಮ್ಮ ಕೈಗೆ ಒಪ್ಪಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ದೇವರು ನಿನಗೆ ಅಧಿಕಾರವನ್ನು ಕೊಟ್ಟಿದ್ದಾನೆ. ಆ ದೇವರು ನಿನ್ನನ್ನು ಎಲ್ಲೆಡೆಯಲ್ಲಿರುವ ಜನರ ಮೇಲೆ, ಕಾಡುಪ್ರಾಣಿಗಳ ಮೇಲೆ, ಪಕ್ಷಿಗಳ ಮೇಲೆ ಆಳುವಂತೆ ಮಾಡಿದ್ದಾನೆ. ಅರಸನಾದ ನೆಬೂಕದ್ನೆಚ್ಚರನೇ, ನೀನೇ ಆ ಪ್ರತಿಮೆಯ ಬಂಗಾರದ ತಲೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಜನರನ್ನು, ಭೂಮಿಯ ಮೃಗಗಳನ್ನು, ಆಕಾಶದ ಪಕ್ಷಿಗಳನ್ನು, ಜೀವಿಸುವಂಥಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು, ಅವೆಲ್ಲವುಗಳಿಗೆ ನಿನ್ನನ್ನು ಆಳುವವನಾಗಿ ಮಾಡಿದ್ದಾರೆ. ಆ ಬಂಗಾರದ ತಲೆಯು ನೀನೇ. ಅಧ್ಯಾಯವನ್ನು ನೋಡಿ |