Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:39 - ಕನ್ನಡ ಸತ್ಯವೇದವು J.V. (BSI)

39 ನೀನೇ ಆ ಬಂಗಾರದ ತಲೆ. ನಿನ್ನ ಕಾಲವಾದ ಮೇಲೆ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯವುಂಟಾಗುವದು; ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನಿಮ್ಮ ಕಾಲವಾದ ಮೇಲೆ ನಿಮಗಿಂತ ಬೀಳಾದ ಮತ್ತೊಂದು ರಾಜ್ಯ ತಲೆಯೆತ್ತಿಕೊಳ್ಳುವುದು. ಅನಂತರ ಬೇರೊಂದು ರಾಜ್ಯ ಕಂಚಿನದಾಗಿ ಕಾಣಿಸಿಕೊಂಡು ಭೂಮಂಡಲವನ್ನೆಲ್ಲ ಆಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ನಿನ್ನ ಕಾಲವಾದ ಮೇಲೆ ಮತ್ತೊಂದು ರಾಜ್ಯವುಂಟಾಗುವುದು. ಅದು ಬೆಳ್ಳಿಯ ಭಾಗ. ಆದರೆ ಆ ರಾಜ್ಯವು ನಿನ್ನ ರಾಜ್ಯದಷ್ಟು ದೊಡ್ಡದಾಗಿರುವುದಿಲ್ಲ. ಆ ತರುವಾಯ ಬೇರೊಂದು ಮೂರನೇ ರಾಜ್ಯವು ಈ ಭೂಮಿಯ ಮೇಲೆ ಆಳ್ವಿಕೆ ಮಾಡುವುದು. ಅದು ಕಂಚಿನ ಭಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಇನ್ನೊಂದು ರಾಜ್ಯ ಏಳುವುದು. ಅನಂತರ ಮೂರನೆಯ ಕಂಚಿನ ರಾಜ್ಯ ಬರುವುದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:39
14 ತಿಳಿವುಗಳ ಹೋಲಿಕೆ  

ಆ ಪ್ರತಿಮೆಯ ತಲೆಯು ಅಪರಂಜಿ, ಎದೆತೋಳುಗಳು ಬೆಳ್ಳಿ, ಹೊಟ್ಟೆಸೊಂಟಗಳು ತಾಮ್ರ,


ಮತ್ತು ಕೋರೆಷನ ವಿಷಯವಾಗಿ - ಅವನು ನನ್ನ ಮಂದೆ ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ ಎಂದು ಹೇಳಿ ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು ಎಂಬದಾಗಿ ಮಾತಾಡುವವನಾಗಿದ್ದೇನೆ.


ಅವನು ನನಗೆ ಹೀಗೆ ಹೇಳಿದನು - ನಾನು ನಿನ್ನ ಬಳಿಗೆ ಏಕೆ ಬಂದೆನೆಂಬದು ನಿನಗೆ ಗೊತ್ತಲ್ಲವೆ; ಈಗ ನಾನು ಪಾರಸಿಯ ರಾಜ್ಯದ ದಿವ್ಯಪಾಲಕನೊಂದಿಗೆ ಹೋರಾಡಲು ಹಿಂದಿರುಗಬೇಕು; ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಆಹಾ, ಗ್ರೀಕ್‍ರಾಜ್ಯದ ದಿವ್ಯಪಾಲಕನು ಎದುರುಬೀಳುವನು.


ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯಯ ಮತ್ತು ಪಾರಸಿಯ ರಾಜ್ಯ.


ಅನಂತರ ಕಪ್ಪು ಕುದುರೆಗಳು ಉತ್ತರದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳು ದಕ್ಷಿಣದೇಶಕ್ಕೆ ಹೋದವು.


ಮೂರನೆಯ ರಥಕ್ಕೆ ಬಿಳಿ ಕುದುರೆಗಳು, ನಾಲ್ಕನೆಯ ರಥಕ್ಕೆ ಮಚ್ಚೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.


ಆಗ ಅವನು ನನಗೆ - ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ವಿುಕ್ಕ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವದು.


ನರಜಾತಿಯವರು ವಾಸಿಸುವ ಸಕಲ ಪ್ರಾಂತಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ.


ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದುಹಾಕುತ್ತದಷ್ಟೆ; ಸಕಲವನ್ನೂ ದ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ದ್ವಂಸಮಾಡುವದು.


ಆ ಹೋತವು ಗ್ರೀಕ್ ರಾಜ್ಯ, ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು