Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:4 - ಕನ್ನಡ ಸತ್ಯವೇದವು J.V. (BSI)

4 ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ - ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು ಎಂದು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಪಂಡಿತರು ಅರಮೀಯ ಭಾಷೆಯಲ್ಲಿ ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ! ಆ ಕನಸನ್ನು ನಿಮ್ಮ ದಾಸರಾದ ನಮಗೆ ಹೇಳಿ. ಅದರ ತಾತ್ಪರ್ಯವನ್ನು ತಿಳಿಸುತ್ತೇವೆ,” ಎಂದು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಆ ಕಸ್ದೀಯರು ಅರಮೇಯಿಕ್ ಭಾಷೆಯಲ್ಲಿ, “ಅರಸನೇ ಚಿರಂಜೀವಿಯಾಗಿರು. ನಾವು ನಿನ್ನ ಸೇವಕರು. ದಯವಿಟ್ಟು ನಮಗೆ ನಿನ್ನ ಕನಸನ್ನು ಹೇಳು. ನಾವು ಅದರ ಅರ್ಥವನ್ನು ತಿಳಿಸುತ್ತೇವೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:4
23 ತಿಳಿವುಗಳ ಹೋಲಿಕೆ  

ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು - ರಾಜನೇ, ಚಿರಂಜೀವಿಯಾಗಿರು, ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!


ರಾಜನಾದ ನೆಬೂಕದ್ನೆಚ್ಚರನಿಗೆ - ಅರಸೇ, ಚಿರಂಜೀವಿಯಾಗಿರು!


ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ವಿುತ್ರದಾತ, ಟಾಬೆಯೇಲ್ ಈ ಮೊದಲಾದವರು ಪಾರಸಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಅರಾಮ್ಯ ಭಾಷೆಯಲ್ಲಿಯೂ ಇತ್ತು.


ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ - ನೀನು ಮಾತಾಡುವದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತಾಡಬೇಡ ಎಂದು ಹೇಳಿದರು.


ದಾನಿಯೇಲನು ರಾಜನಿಗೆ - ಅರಸೇ, ಚಿರಂಜೀವಿಯಾಗಿರು!


ಹೀಗೆ ಮುಖ್ಯಾಧಿಕಾರಿಗಳೂ ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ - ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!


ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲ ಬಾಳಲಿ ಎಂದಳು.


ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.


ಆಸ್ಥಾನ ವಿದ್ವಾಂಸರೆಲ್ಲರು ಬಂದು ನೋಡಿದರು. ಆದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ರಾಜನಿಗೆ ತಿಳಿಸುವದಕ್ಕೂ ಅವರಲ್ಲಿ ಯಾರಿಂದಲೂ ಆಗಲಿಲ್ಲ.


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ಇವರು ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ ಕಣಿಹೇಳುವವರನ್ನು ಮರುಳುಗೊಳಿಸಿ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಹುಚ್ಚುತನವಾಗಮಾಡಿ


ನಾನು ಅರಸನಿಗೆ - ಅರಸನು ಚಿರಂಜೀವಿಯಾಗಿರಲಿ. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವದು ಹೇಗೆ ಎಂದು ಹೇಳಿದೆನು.


ಅವನು ಗಟ್ಟಾ ಇಳಿದು ಹೋಗಿ ಹೋರಿಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಎಲ್ಲಾ ರಾಜಪುತ್ರರನ್ನೂ ಸೇನಾಪತಿಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ ಎಂದು ಕೂಗುತ್ತಿರುತ್ತಾರೆ.


ಆಗ ಸಮುವೇಲನು ಎಲ್ಲಾ ಜನರಿಗೆ - ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ ಎನ್ನಲು ಜನರೆಲ್ಲರೂ - ಅರಸನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.


ಬೆಳಿಗ್ಗೆ ಅವನು ಮನದಲ್ಲಿ ಕಳವಳಗೊಂಡು ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ ವಿದ್ವಾಂಸರನ್ನೂ ಕರಸಿ ಅವರಿಗೆ ತನ್ನ ಕನಸನ್ನು ತಿಳಿಸಲಾಗಿ ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಅವರಲ್ಲಿ ಒಬ್ಬರೂ ಸಿಕ್ಕಲಿಲ್ಲ.


ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದೂ ಯಾಕೋಬನು ಗಲೇದ್ ಎಂದೂ ಹೆಸರಿಟ್ಟರು. ಲಾಬಾನನು -


ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ - ನೀನು ಮಾತಾಡುವದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತಾಡಬೇಡ ಎಂದು ಹೇಳಿದರು.


ಅಂಗದೋಷವಿಲ್ಲದವರೂ ಸುಂದರರೂ ಸಮಸ್ತಶಾಸ್ತ್ರಜ್ಞರೂ ಪಂಡಿತರೂ ವಿದ್ಯಾನಿಪುಣರೂ ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕೆಂಬದಾಗಿ ಅಪ್ಪಣೆಕೊಟ್ಟನು.


ರಾಜನು ತನ್ನ ದಾಸರಿಗೆ ಕನಸನ್ನು ತಿಳಿಸೋಣವಾಗಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು ಎಂಬ ಉತ್ತರವನ್ನೇ ಪುನಃ ಕೊಟ್ಟರು.


ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬದು ನನಗೆ ಗೊತ್ತು. ಆದದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.


ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞಾರೂಪವಾಗಿ ವಿಧಿಸುವದು ಒಳ್ಳೇದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ ನಾಯಕ ದೇಶಾಧಿಪತಿ ಮಂತ್ರಿ ಸಂಸ್ಥಾನಾಧ್ಯಕ್ಷರೂ ಆಲೋಚನೆಮಾಡಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು