40 ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದುಹಾಕುತ್ತದಷ್ಟೆ; ಸಕಲವನ್ನೂ ದ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ದ್ವಂಸಮಾಡುವದು.
40 “ನಾಲ್ಕನೆಯ ರಾಜ್ಯವು ಕಬ್ಬಿಣದಷ್ಟು ಗಟ್ಟಿ; ಕಬ್ಬಿಣವು ಎಲ್ಲಾ ವಸ್ತುಗಳನ್ನು ಚೂರುಚೂರಾಗಿ ಒಡೆದು ಹಾಕುತ್ತದಷ್ಟೆ; ಸಕಲವನ್ನೂ ಧ್ವಂಸಮಾಡುವ ಕಬ್ಬಿಣದಂತೆಯೇ ಅದು ಚೂರುಚೂರಾಗಿ ಧ್ವಂಸಮಾಡುವುದು.
40 ಆಮೇಲೆ ನಾಲ್ಕನೆಯ ರಾಜ್ಯ. ಆ ರಾಜ್ಯವು ಕಬ್ಬಿಣದಂತೆ ಗಟ್ಟಿಯಾಗಿರುತ್ತದೆ. ಹೇಗೆ ಕಬ್ಬಿಣವು ಎಲ್ಲ ವಸ್ತುಗಳನ್ನು ಒಡೆದು ಪುಡಿ ಮಾಡುತ್ತದೆಯೋ ಹಾಗೆಯೇ ಆ ನಾಲ್ಕನೆಯ ರಾಜ್ಯವು ಉಳಿದೆಲ್ಲ ರಾಜ್ಯಗಳನ್ನು ಒಡೆದು ಪುಡಿ ಮಾಡುತ್ತದೆ.
40 ಆಮೇಲೆ ನಾಲ್ಕನೆಯ ರಾಜ್ಯವು ಕಬ್ಬಿಣದ ಹಾಗೆ ಬಲವಾಗಿ ಇರುವುದು. ಏಕೆಂದರೆ ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು, ಚೂರುಚೂರು ಮಾಡುತ್ತದೆ. ಕಬ್ಬಿಣವು ಹೇಗೆ ಎಲ್ಲವನ್ನು ಚೂರು ಮಾಡುವುದೋ, ಹಾಗೆಯೇ ಆ ರಾಜ್ಯವು ಇತರರೆಲ್ಲರನ್ನು ಚೂರುಚೂರಾಗಿ ಮಾಡಿ ಧ್ವಂಸ ಮಾಡುವುದು.
ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರ, ಹೆದರಿಸುವಂಥದು, ಅಧಿಕಬಲವುಳ್ಳದ್ದು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು; ಅದು ನುಂಗುತ್ತಾ ಚೂರುಚೂರು ಮಾಡುತ್ತಾ ವಿುಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು; ಅದು ಮುಂಚಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು; ಅದಕ್ಕೆ ಹತ್ತು ಕೊಂಬುಗಳಿದ್ದವು.
ಯೆಹೋವನು ಇಂತೆನ್ನುತ್ತಾನೆ - ದಮಸ್ಕವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.
ನೀನೇ ಆ ಬಂಗಾರದ ತಲೆ. ನಿನ್ನ ಕಾಲವಾದ ಮೇಲೆ ನಿನಗಿಂತ ಕನಿಷ್ಠವಾದ ಮತ್ತೊಂದು ರಾಜ್ಯವುಂಟಾಗುವದು; ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವದು.
ಹೆಜ್ಜೆಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ ಒಂದಂಶವು ಕಬ್ಬಿಣವೂ ಆಗಿದ್ದದ್ದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನಭಿನ್ನವಾಗಿರುವದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ವಿುಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವದು.