ದಾನಿಯೇಲ 2:41 - ಕನ್ನಡ ಸತ್ಯವೇದವು J.V. (BSI)41 ಹೆಜ್ಜೆಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ ಒಂದಂಶವು ಕಬ್ಬಿಣವೂ ಆಗಿದ್ದದ್ದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನಭಿನ್ನವಾಗಿರುವದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ವಿುಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 “ಪಾದಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ, ಒಂದಂಶವು ಕಬ್ಬಿಣವೂ ಆಗಿದ್ದುದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನ ಭಿನ್ನವಾಗಿರುವುದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ಮಿಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಪಾದಗಳಲ್ಲಿ ಹಾಗು ಪಾದಬೆರಳುಗಳಲ್ಲಿ ಒಂದು ಅಂಶ ಕಬ್ಬಿಣ ಮತ್ತೊಂದು ಅಂಶ ಮಣ್ಣು ಆಗಿದ್ದನ್ನು ನೀವು ನೋಡಿದಿರಿ. ಅಂತೆಯೇ ಆ ರಾಜ್ಯವು ಭಿನ್ನಭಿನ್ನವಾಗಿರುವುದು. ಜೇಡಿಮಣ್ಣಿನೊಂದಿಗೆ ಕಬ್ಬಿಣ ಮಿಶ್ರವಾಗಿದ್ದನ್ನು ನೀವು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲ ಸೇರಿರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 “ಆ ಪ್ರತಿಮೆಯ ಪಾದಗಳು ಮತ್ತು ಕಾಲ್ಬೆರಳುಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಿದ್ದನ್ನು ನೀನು ನೋಡಿರುವೆ. ನಾಲ್ಕನೆಯ ರಾಜ್ಯವು ವಿಭಜಿತ ರಾಜ್ಯವಾಗುವದೆಂದು ಇದರ ಅರ್ಥ. ನೀನು ನೋಡಿದಂತೆ ಕಬ್ಬಿಣವು ಜೇಡಿಮಣ್ಣಿನಲ್ಲಿ ಬೆರೆತದ್ದರಿಂದ ಅದರಲ್ಲಿ ಕಬ್ಬಿಣದ ಗಟ್ಟಿತನ ಸ್ವಲ್ಪ ಇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಪಾದಗಳನ್ನೂ, ಕಾಲಿನ ಬೆರಳುಗಳನ್ನೂ ಅರ್ಧ ಮಣ್ಣಿನಿಂದಲೂ, ಅರ್ಧ ಕಬ್ಬಿಣದಿಂದಲೂ ಉಂಟಾದವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗವಾಗಿರುವುದು. ಆದರೆ ಅದರ ಬಲವು ನೀನು ಜೇಡಿಮಣ್ಣಿನ ಸಂಗಡ ಜೊತೆಗೂಡಿದ ಕಬ್ಬಿಣವನ್ನು ನೋಡಿದ ಹಾಗಿರುವುದು. ಅಧ್ಯಾಯವನ್ನು ನೋಡಿ |
ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರ, ಹೆದರಿಸುವಂಥದು, ಅಧಿಕಬಲವುಳ್ಳದ್ದು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು; ಅದು ನುಂಗುತ್ತಾ ಚೂರುಚೂರು ಮಾಡುತ್ತಾ ವಿುಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು; ಅದು ಮುಂಚಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು; ಅದಕ್ಕೆ ಹತ್ತು ಕೊಂಬುಗಳಿದ್ದವು.