Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:44 - ಕನ್ನಡ ಸತ್ಯವೇದವು J.V. (BSI)

44 ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 “ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:44
38 ತಿಳಿವುಗಳ ಹೋಲಿಕೆ  

ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ನಿನ್ನ ರಾಜ್ಯವು ಶಾಶ್ವತವಾಗಿದೆ; ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವದು.


ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;


ಆ ಕುಂಟುಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು; ಯೆಹೋವನು ಚೀಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರ ರಾಜನಾಗಿರುವನು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;


ನಿನ್ನನ್ನು ಸೇವಿಸಲೊಲ್ಲದ ಜನಾಂಗ ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳೇ ಹಾಳಾಗಿ ಹೋಗುವವು.


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳಿಕೆಯು ತಲತಲಾಂತರಕ್ಕೂ ನಿಲ್ಲುವದು.


ಅರಸೇ, ನೀನು ರಾಜಾಧಿರಾಜ, ಪರಲೋಕದೇವರು ನಿನಗೆ ರಾಜ್ಯಬಲಪರಾಕ್ರಮ ವೈಭವಗಳನ್ನು ದಯಪಾಲಿಸಿದ್ದಾನೆ;


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಆದರೆ ರಹಸ್ಯಗಳನ್ನು ವ್ಯಕ್ತಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಪರಲೋಕದಲ್ಲಿದ್ದಾನೆ; ಉತ್ತರಕಾಲದಲ್ಲಿ ನಡೆಯತಕ್ಕದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ -


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು; ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವದು.


ಅದಕ್ಕೆ ಆ ಜನರು - ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಆ ಮನುಷ್ಯಕುಮಾರನು ಯಾರು? ಅಂದರು.


ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸಿ ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.


ನೀನು ನೋಡುತ್ತಿರಲಾಗಿ [ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು [ಸಿಡಿದು ಬಂದು] ಆ ಪ್ರತಿಮೆಯ ಕಬ್ಬಿಣಮಣ್ಣಿನ ಹೆಜ್ಜೆಗಳಿಗೆ ಬಡಿದು ಚೂರುಚೂರು ಮಾಡಿತು.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಹೊಂದುವವರಾದ ನಾವು ಕೃತಜ್ಞತೆಯುಳ್ಳವರಾಗಿದ್ದು ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಭಯದಿಂದಲೂ ಮಾಡೋಣ;


ಆಗ ಕಬ್ಬಿಣಮಣ್ಣು ತಾಮ್ರಬೆಳ್ಳಿಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು.


ಕಬ್ಬಿಣವು ಜೇಡಿಮಣ್ಣಿನೊಂದಿಗೆ ಬೆರೆತಿರುವದನ್ನು ನೀನು ನೋಡಿದ ಮೇರೆಗೆ ಆ ರಾಜ್ಯಾಂಶಗಳು ಸಂತತಿ ಸಂಬಂಧದಿಂದ ಬೆರೆತುಕೊಳ್ಳುವವು; ಆದರೆ ಕಬ್ಬಿಣವು ಮಣ್ಣಿನೊಂದಿಗೆ ಹೇಗೆ ಕಲೆಯುವದಿಲ್ಲವೋ ಹಾಗೆ ಅವು ಒಂದಕ್ಕೊಂದು ಅಂಟಿಕೊಳ್ಳುವದಿಲ್ಲ.


ಸಕಲಜನಾಂಗಗಳನ್ನು ನಡುಗಿಸುವೆನು; ಆಗ ಸಮಸ್ತಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಆ ಆಲಯವನ್ನು ವೈಭವದಿಂದ ತುಂಬಿಸುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವವು; ನಿನ್ನ ಸಿಂಹಾಸನವು ಶಾಶ್ವತವಾಗಿರುವದು ಎಂಬದೇ.


ಆತನು ಉದ್ಧರಿಸುವವನೂ ರಕ್ಷಿಸುವವನೂ ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡಿಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಕೈಯಿಂದ ತಪ್ಪಿಸಿದನು.


ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು