ದಾನಿಯೇಲ 2:48 - ಕನ್ನಡ ಸತ್ಯವೇದವು J.V. (BSI)48 ಬಳಿಕ ರಾಜನು ದಾನಿಯೇಲನನ್ನು ದೊಡ್ಡಸ್ತಿಕೆಗೆ ತಂದು ಅವನಿಗೆ ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟು ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇವಿುಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಬಳಿಕ ರಾಜನು ದಾನಿಯೇಲನನ್ನು ದೊಡ್ಡ ಪದವಿಗೆ ಏರಿಸಿದನು. ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟನು. ಬಾಬಿಲೋನಿನ ಸಂಸ್ಥಾನವನ್ನೆಲ್ಲ ಅವನಿಗೆ ಅಧೀನಪಡಿಸಿ ಬಾಬಿಲೋನಿನ ಎಲ್ಲಾ ವಿದ್ವಾಂಸರಿಗೂ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ತರುವಾಯ ಅರಸನು ದಾನಿಯೇಲನಿಗೆ ತನ್ನ ರಾಜ್ಯದಲ್ಲಿ ಬಹುಮುಖ್ಯವಾದ ಉದ್ಯೋಗವನ್ನು ಕೊಟ್ಟನು. ಅಮೂಲ್ಯವಾದ ಕಾಣಿಕೆಗಳನ್ನೂ ಕೊಟ್ಟನು. ನೆಬೂಕದ್ನೆಚ್ಚರನು ದಾನಿಯೇಲನನ್ನು ಬಾಬಿಲೋನ್ ಸಂಸ್ಥಾನದ ಅಧಿಪತಿಯನ್ನಾಗಿ ಮಾಡಿದನು. ಬಾಬಿಲೋನಿನ ಎಲ್ಲಾ ವಿದ್ವಾಂಸರ ಮುಖ್ಯಸ್ಥನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು. ಅಧ್ಯಾಯವನ್ನು ನೋಡಿ |
ನೀನೋ ಗೂಢಾರ್ಥಗಳನ್ನು ವಿವರಿಸಿ ಗುಂಜುಗಂಟುಗಳನ್ನು ಬಿಚ್ಚಬಲ್ಲವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ನಿನ್ನನ್ನು ರಾಜ್ಯದ - ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.
ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ ಪಂಡಿತ ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ - ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.