Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:5 - ಕನ್ನಡ ಸತ್ಯವೇದವು J.V. (BSI)

5 ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ - ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ ಅದರ ಅಭಿಪ್ರಾಯವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ಚೂರುಚೂರಾಗಿ ಕಡಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಸಿಬಿಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ರಾಜನು ಆ ಪಂಡಿತರಿಗೆ, “ನನ್ನ ಈ ಮಾತು ಖಂಡಿತ; ನೀವು ಈ ಕನಸನ್ನೂ ಅದರ ಉದ್ದೇಶವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು; ನಿಮ್ಮ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಅರಸನಾದ ನೆಬೂಕದ್ನೆಚ್ಚರನು, “ಹಾಗಲ್ಲ, ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ತಿಳಿಸಬೇಕು. ಇಲ್ಲವಾದರೆ ನಾನು ನಿಮ್ಮ ದೇಹವನ್ನು ತುಂಡುತುಂಡಾಗಿ ಕತ್ತರಿಸಲು ಆಜ್ಞಾಪಿಸುತ್ತೇನೆ. ನಿಮ್ಮ ಮನೆಗಳನ್ನು ಬೀಳಿಸಿ ಮಣ್ಣುಗುಡ್ಡೆಯನ್ನಾಗಿಯೂ ಮತ್ತು ಬೂದಿರಾಶಿಯನ್ನಾಗಿಯೂ ಮಾಡುವಂತೆ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅರಸನು ಪಂಡಿತರಿಗೆ ಉತ್ತರವಾಗಿ, “ನನ್ನ ಈ ಮಾತು ಖಂಡಿತ. ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ, ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು. ನಿಮ್ಮ ಮನೆಗಳನ್ನು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:5
10 ತಿಳಿವುಗಳ ಹೋಲಿಕೆ  

ಸಕಲ ಜನಾಂಗಕುಲಭಾಷೆಗಳವರಲ್ಲಿ ಯಾರಾದರೂ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರ ವಿಷಯದಲ್ಲಿ ಅಲ್ಲದ ಮಾತನ್ನಾಡಿದರೆ ಅವರನ್ನು ಚೂರುಚೂರಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವಲ್ಲಾ ಎಂದು ಹೇಳಿದನು.


ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು ಅದನ್ನು ಶೂಲವನ್ನಾಗಿ ಮಾಡಿ ಅದಕ್ಕೆ ಅವನನ್ನು ಎತ್ತಬೇಕೆಂದೂ ಆ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದೂ ತೀರ್ಮಾನಿಸುತ್ತೇನೆ.


ಇದಲ್ಲದೆ ಬಾಳನ ವಿಗ್ರಹಸ್ತಂಭವನ್ನೂ ದೇವಸ್ಥಾನವನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಕ್ಕಾಗಿ ಉಪಯೋಗಿಸುತ್ತಾರೆ.


ದೇವರನ್ನು ಬಿಟ್ಟವರೇ, ಇದನ್ನು ಮನಸ್ಸಿಗೆ ತಂದುಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವದಿಲ್ಲ.


ಇದನ್ನು ಕೇಳಿ ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.


ಕ್ಷಣದಲ್ಲಿ ಹರಿದು ಕಾಣದೆಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.


ಆದರೆ ಸಮುವೇಲನು ಅವನಿಗೆ - ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರ ಶೋಕವನ್ನುಂಟುಮಾಡಿತು; ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದು ಹಾಕಿದನು.


ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ನಿಶ್ಶೇಷವಾಗಿ ಸುಟ್ಟುಬಿಡಬೇಕು. ಅದು ತಿರಿಗಿ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.


ಅದೇ ಸಮಯದಲ್ಲಿ ಯೆಹೋಶುವನು ಇಸ್ರಾಯೇಲ್ಯರಿಂದ ಪ್ರಮಾಣಮಾಡಿಸಿ ಅವರಿಗೆ - ಈ ಯೆರಿಕೋ ಪಟ್ಟಣವನ್ನು ಕಟ್ಟುವದಕ್ಕೆ ಕೈ ಹಚ್ಚುವ ಮನುಷ್ಯನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ. ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ತನ್ನ ಹಿರೀ ಮಗನನ್ನೂ ಬಾಗಲುಗಳನ್ನಿಡುವಾಗ ಕಿರೀ ಮಗನನ್ನೂ ಕಳೆದುಕೊಳ್ಳಲಿ ಎಂದು ಹೇಳಿದನು.


ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬದು ನನಗೆ ಗೊತ್ತು. ಆದದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು