ದಾನಿಯೇಲ 3:1 - ಕನ್ನಡ ಸತ್ಯವೇದವು J.V. (BSI)1 ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬೆಲ್ ಸಂಸ್ಥಾನದ ದೂರಾ ಎಂಬ ಬೈಲಿನಲ್ಲಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ರಾಜ ನೆಬೂಕದ್ನೆಚ್ಚರನು 27 ಮೀಟರ್ ಎತ್ತರದ 3 ಮೀಟರ್ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬಿಲೋನ್ ಸಂಸ್ಥಾನದ ‘ದೂರಾ’ ಎಂಬ ಬಯಲಿನಲ್ಲಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅರಸನಾದ ನೆಬೂಕದ್ನೆಚ್ಚರನು ಒಂದು ಬಂಗಾರದ ವಿಗ್ರಹವನ್ನು ಮಾಡಿಸಿದ್ದನು. ಆ ವಿಗ್ರಹವು ಅರವತ್ತು ಮೊಳ ಎತ್ತರವಾಗಿತ್ತು. ಆರು ಮೊಳ ಅಗಲವಾಗಿತ್ತು. ಆ ವಿಗ್ರಹವನ್ನು ಬಾಬಿಲೋನ್ ಪ್ರಾಂತ್ಯದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿ |
ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;