Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:10 - ಕನ್ನಡ ಸತ್ಯವೇದವು J.V. (BSI)

10 ಪ್ರಭುವೇ, ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಪೂಜಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರಭುವೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪ್ರಭುವೇ, ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅರಸನೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಬೇಕು ಎಂದು ತಾವು ಆಜ್ಞೆ ಕೊಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾಗಸ್ವರ ಮುಂತಾದ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿದಾಗ ಪ್ರತಿಯೊಬ್ಬ ಮನುಷ್ಯನು ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ ಅರಸನು ಆಜ್ಞೆಯನ್ನು ಹೊರಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:10
24 ತಿಳಿವುಗಳ ಹೋಲಿಕೆ  

ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ - ರಾಜನೇ, ಯಾವನಾದರೂ ಮೂವತ್ತು ದಿನಗಳ ತನಕ ನಿನಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ವಿಜ್ಞಾಪನೆಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದಿಯಲ್ಲಾ ಎಂದು ಕೇಳಲು ರಾಜನು - ಹೌದು, ಮೇದ್ಯಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರ ಎಂದು ಉತ್ತರಕೊಟ್ಟನು.


ಆದರೆ ಮಹಾಯಾಜಕರೂ ಫರಿಸಾಯರೂ ಆತನನ್ನು ಹಿಡಿಯಬೇಕೆಂಬದಾಗಿ ಯೋಚಿಸಿ - ಅವನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.


ವೀಣೆಯ ಮೇಲೆ ಮನಸ್ಸುಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ,


ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


ಅಯ್ಯೋ, ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ ನನ್ನ ಜನರಲ್ಲಿನ ದರಿದ್ರರಿಗೆ ನ್ಯಾಯವನ್ನು ತಪ್ಪಿಸಬೇಕೆಂತಲೂ ವಿಧವೆಯರನ್ನು ಸೂರೆಮಾಡಿ ಅನಾಥರನ್ನು ಕೊಳ್ಳೆಹೊಡೆಯಬೇಕೆಂತಲೂ


ಇದಲ್ಲದೆ ನಾನು ಲೋಕವನ್ನು ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ ಧರ್ಮಸ್ಥಾನದಲ್ಲಿಯೂ ಅಧರ್ಮವಿರುವದೆಂದು ನೋಡಿದೆನು.


ಧರ್ಮಶಾಸ್ತ್ರದ ನೆವನದಿಂದ ಕೇಡುಕಲ್ಪಿಸುವ ನಾಶಕರನ್ಯಾಯಾಸನಕ್ಕೂ ನಿನಗೂ ಸಂಬಂಧವೇನು?


ಇದಲ್ಲದೆ ಅವನು ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದ ಭಜಿಸುವದಕ್ಕೋಸ್ಕರ ಲೇವಿಯರನ್ನು ದಾವೀದ, ರಾಜದರ್ಶಿಯಾದ ಗಾದ್, ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ಇರಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.


ಹೀಗೆ ಎಲ್ಲಾ ಇಸ್ರಾಯೇಲ್ಯರು ಆರ್ಭಟಿಸುತ್ತಾ ಕೊಂಬು ತುತೂರಿಗಳನ್ನು ಗಟ್ಟಿಯಾಗಿ ಊದುತ್ತಾ ತಾಳಹೊಡೆಯುತ್ತಾ ಕಿನ್ನರಿ ಸ್ವರಮಂಡಲಗಳನ್ನು ಬಾರಿಸುತ್ತಾ ಯೆಹೋವನ ನಿಬಂಧನಮಂಜೂಷವನ್ನು ತಂದರು.


ಆಗ ದಾವೀದನು ಲೇವಿಯರ ಪ್ರಧಾನರಿಗೆ - ಗಾಯಕರಾದ ನಿಮ್ಮ ಸಹೋದರರನ್ನು ಸ್ವರಮಂಡಲ ಕಿನ್ನರಿ ತಾಳ ಮೊದಲಾದ ವಾದ್ಯಗಳಿಂದ ಉತ್ಸಾಹ ಧ್ವನಿಮಾಡುವದಕ್ಕಾಗಿ ನೇವಿುಸಿರಿ ಎಂದು ಆಜ್ಞಾಪಿಸಲು


ತರುವಾಯ ಫರೋಹನು ತನ್ನ ಜನರಿಗೆಲ್ಲಾ - [ಇಬ್ರಿಯರ] ಗಂಡುಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು ಎಂದು ಆಜ್ಞೆ ಮಾಡಿದನು.


ಅವರಿಗೆ - ನೀವು ಇಬ್ರಿಯರ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವದು ಗಂಡುಮಗುವಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು ಎಂದು ಹೇಳಿದನು.


ಯಾವನು ಅಡ್ಡಬಿದ್ದು ಪೂಜಿಸುವದಿಲ್ಲವೋ ಅವನು ಧಗಧಗಿಸುವ ಆವಿಗೆಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು